ಜನ ಮನದ ನಾಡಿ ಮಿಡಿತ

Advertisement

ಕ್ರೆಡೈ ಮಂಗಳೂರು ವತಿಯಿಂದ ಮಾರ್ಚ್ 9 ಮತ್ತು 10ರಂದು ‘ರಿಯಾಲ್ಟಿ ಎಕ್ಸ್ಪೋ’

ಮಂಗಳೂರು:ಕ್ರೆಡೈ ಮಂಗಳೂರು ವತಿಯಿಂದ 2024ರ ಮಾರ್ಚ್ 9 ಮತ್ತು 10ರಂದು ಎರಡು ದಿನಗಳ ಕಾಲ ಬೃಹತ್ ಮಟ್ಟದ ‘ರಿಯಾಲ್ಟಿ ಎಕ್ಸ್ಪೋ’ ಆಯೋಜಿಸಲಾಗಿದೆ ಎಂದು ಕ್ರೆಡೈ ಸಂಸ್ಥೆಯ ಅಧ್ಯಕ್ಷ ವಿನೋದ್ ಪಿಂಟೋ ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಅವರು, 50ಕ್ಕೂ ಹೆಚ್ಚು ಉದ್ಯಮಿಗಳು, ವಿವಿಧ ಉದ್ಯಮ ಸಂಸ್ಥೆಗಳು ಸೇರಿಕೊಂಡು ಈ ಎಕ್ಸ್ ಪೋ ವನ್ನ ಆಯೋಜನೆ ಮಾಡಲು ನಿರ್ಧರಿಸಿದೆ. ಗ್ರಾಹಕರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ದೊರೆಯುವಂತೆ ಎಕ್ಸ್ಪೋ ದಲ್ಲಿ ವ್ಯವಸ್ಥೆ ಮಾಡಲಾಗುವುದು. ಲಕ್ಸುರಿ ಅಪಾರ್ಟ್ಮೆಂಟ್‌ಗಳು, ಎಲೆಕ್ಟ್ರಾನಿಕ್ಸ್ ಉತ್ಪನ್ನಗಳು, ವಸತಿ, ಬ್ಯಾಂಕ್, ಕಾರ್ ಡೀಲರ್ಸ್ ಸೇರಿದಂತೆ ವಿವಿಧ ಸಂಸ್ಥೆಗಳು ಎಕ್ಸ್ ಪೋದಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಈ ಸುದ್ದಿಗೋಷ್ಠಿಯಲ್ಲಿ ಕ್ರೆಡೈ ಕಾರ್ಯದರ್ಶಿ ಗುರು ಎಂ ರಾವ್, ಉಪಾಧ್ಯಕ್ಷ ಪ್ರಶಾಂತ್ ಸನಿಲ್, ಜತೆ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ಭಂಡಾರಿ, ಕೋಶಾಧಿಕಾರಿ ಕರುಣಾಕರನ್ , ಪ್ರಮುಖರಾದ ರೋಹನ್ ಮೊಂತೇರೊ, ನವೀನ್ ಕಾರ್ಡೋಜ, ಧೀರಜ್ ಅಮೀನ್, ಅವಲೋನ್ ಪಾತ್ರೊ, ವಿಲಿಯಂ ಡಿಸೋಜ, ರವೀಂದ್ರ ರಾವ್ ಹಾಗು ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!