ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಲಕ್ಷಾಂತರ ರೂ. ಕಳವುಗೈದ ಹೋಮ್ ನರ್ಸ್ ಅರೆಸ್ಟ್

ಉಡುಪಿ: ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಸಂತೋಷ್ ಎಂಬವರ ಮನೆಯಲ್ಲಿ ಹಾಗೂ ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದ ಲಕ್ಷಾಂತರ ರೂ. ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಂಧಿತ ಆರೋಪಿಯನ್ನು ಹುನಗುಂದ ತಾಲೂಕಿನ ಪ್ರವೀಣ್‌ ಕುಮಾರ್‌ ಜಾಲಪ್ಪ ಹರದೊಳ್ಳ (34) ಎಂದು ಗುರುತಿಸಲಾಗಿದೆ. ಆರೋಪಿ ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದನು.

ಈತನನ್ನು ಮನೆ ಮಾಲೀಕ ಮಾತಾ ಸೆಲ್ಯೂಷನ್‌ ಹೋಮ್‌ ನರ್ಸ್‌ ಎಂಬ ಸಂಸ್ಥೆಯಿಂದ ಕೆಲಸಕ್ಕೆ ಇಟ್ಟುಕೊಂಡಿದ್ದರು. ಆದರೆ ಪ್ರವೀಣ್ ಕುಮಾರ್ ಡಿ. 4ರಂದು ಸಂಜೆ ಏಕಾಏಕಿಯಾಗಿ ಮನೆಯಿಂದ ಕಾಣೆಯಾಗಿದ್ದನು. ಮನೆಯಲ್ಲಿ ಹಾಗೂ ಕಾರಿನ ಡ್ಯಾಶ್ ಬೋರ್ಡ್ ನಲ್ಲಿಟ್ಟಿದ್ದ 3,45,000 ಲಕ್ಷ ರೂಪಾಯಿಯನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ಮನೆ ಮಾಲೀಕ ಸಂತೋಷ್ ನೀಡಿದ ದೂರಿನಂತೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆಗೆ ಇಳಿದ ಉಡುಪಿ ನಗರ ಪೊಲೀಸರು ಡಿ. 7ರಂದು ಆರೋಪಿ ಪ್ರವೀಣ್ ನನ್ನು ಬಾಗಲಕೋಟೆಯಲ್ಲಿ ವಶಕ್ಕೆ ಪಡೆದು, ಆತನಿಂದ ಕಳವು ಮಾಡಿದ್ದ 3,13,500 ರೂಪಾಯಿಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!