ವಿದ್ಯಾರ್ಥಿಯನ್ನು ಶಾಲೆಯಿಂದ ಹೊರ ಹಾಕುವಂತೆ ಒತ್ತಾಯಿಸಿ ಪೋಷಕರು ಪ್ರತಿಭಟನೆ ನಡೆಸಿದ ಅಪರೂಪದ ಘಟನೆ ಪುತ್ತೂರಿನ ಮೇನಾಲ ಎಂಬಲ್ಲಿ ನಡೆದಿದೆ.


6 ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಕುಡಿದು ಶಾಲೆಗೆ ಬರುತ್ತಾನೆ ಎಂದು ಆರೋಪಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನು ವಿದ್ಯಾರ್ಥಿ ವಿರುದ್ಧ ಪೋಷಕರು ಪ್ರತಿಭಟಿಸಿದ ಹಿನ್ನೆಲೆ ಪೋಷಕರಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗಿದೆ. ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪೋಷಕರ ಜೊತೆ ಚರ್ಚೆ ನಡೆಸಿದ್ದಾರೆ.



