ಜನ ಮನದ ನಾಡಿ ಮಿಡಿತ

Advertisement

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀಡಿ ಕಾರ್ಮಿಕರಿಂದ ಧರಣಿ

ಬೀಡಿ ಕಾರ್ಮಿಕರ ತುಟ್ಟಿಭತ್ಯೆ, ಕನಿಷ್ಠ ಕೂಲಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಕಾರ್ಕಳ ಮಿನಿ ವಿಧಾನ ಸೌಧದ ಮುಂದೆ ಧರಣಿ ನಡೆಸಲಾಯಿತು.

ಪ್ರತಿ 1000 ಬೀಡಿಗೆ ಹೊಸ ವೇತನ 400ರೂ.ನಂತೆ ನಿಗದಿಗೊಳಿಸಿ, ಸರಕಾರ ಆದೇಶ ಮಾಡಬೇಕು. ಬಡ ಬೀಡಿ ಕಾರ್ಮಿಕರಿಗೆ ಅನ್ಯಾಯ ಮಾಡುವ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗ್ರಾಚ್ಯುವಿಟಿ ಕಡ್ಡಾಯ ಪಾವತಿಸು ವಂತೆ ಮಾಡಬೇಕು. ವಾರ ಪೂರ್ತಿ ಕೆಲಸ ಅಥವಾ ಕೆಲಸ ಇಲ್ಲದ ದಿನ ವೇತನ ನೀಡಲು ಬೀಡಿ ಮಾಲೀಕರಿಗೆ ಸೂಚಿಸಬೇಕು ಎಂದು ಬೀಡಿಕಾರ್ಮಿಕರ ನೈಜ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿ, ಪರಿಹಾರ ಕಾಣಬೇಕು. ಕಾನೂನು ಬಾಹಿರ ಬೀಡಿ ಉತ್ಪಾದನೆಯನ್ನು ನಿಲ್ಲಿಸಿ, ಕಾರ್ಮಿಕ ಕಾನೂನುಗಳ ಕಠಣ ಜಾರಿಗೆ ಕ್ರಮ ವಹಿಸಬೇಕು. ಬೀಡಿ ಕಾರ್ಮಿಕರ ಆರೋಗ್ಯದ ಬಗ್ಗೆ ಸರಕಾರ ಜವಾಬ್ದಾರಿ ವಹಿಸಬೇಕು. ಬೀಡಿ ಕಾರ್ಮಿಕರಿಗೆ ಇ.ಎಸ್.ಐ. ಸೌಲಭ್ಯ ಒದಗಿಸಬೇಕು. ತಿಂಗಳಿಗೆ 6000ರೂ. ಪಿಂಚಣಿ ನೀಡ ಬೇಕು. ಬೀಡಿಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಕೊಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.ಬಳಿಕ ತಹಶಿಲ್ದಾರರ ಮುಖಾಂತರ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.


ರಾಜ್ಯ ಬೀಡಿ ಫೆಡರೇಶನ್‌ನ ಉಪಾಧ್ಯಕ್ಷ ಬಿ.ಎಂ.ಭಟ್ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲಾ ಬೀಡಿ ಫೆಡರೇಶನ್‌ನ ಅಧ್ಯಕ್ಷ ಮಹಾಬಲ ವಡೆಯರಹೋಬಳಿ, ಕಾರ್ಯದರ್ಶಿ ಉಮೇಶ್ ಕುಂದರ್, ಮುಖಂಡರಾದ ಬಲ್ಕೀಸ್, ನಳಿನಿ, ಕಾರ್ಕಳ ಬೀಡಿ ಸಂಘದ ಅಧ್ಯಕ್ಷೆ ಸುನೀತಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್., ಕೋಶಾಧಿಕಾರಿ ಸುಮತಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!