ಜನ ಮನದ ನಾಡಿ ಮಿಡಿತ

Advertisement

ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ ಕೇಸ್: ಸಾಕು ಮಗಳ ಕರೆದೊಯ್ದ ನಾಲ್ವರ ಬಂಧನ..!!

ಕಾಪುವಿನ ಸಮಾಜ ಸೇವಕ ಲೀಲಾಧರ ಶೆಟ್ಟಿಯವರ ಅಪ್ರಾಪ್ತ ವಯಸ್ಸಿನ ಸಾಕು ಮಗಳ ನಾಪತ್ತೆ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. 

ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗಿರೀಶ್ (20), ನಾಪತ್ತೆಯಾಗಲು ಸಹಕರಿಸಿದ ಶಿರ್ವದ ರೂಪೇಶ್ (22), ಜಯಂತ್ (23) ಮತ್ತು ಮಜೂರು ನಿವಾಸಿ ಮೊಹಮ್ಮದ್ ಅಜೀಝ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮತ್ತು ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಪೊಲೀಸರು ಕುಂಬ್ಳೆ ಬಳಿ ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ಲೀಲಾಧರ ಶೆಟ್ಟಿ ಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವೊಂದನ್ನು ದತ್ತು ಪಡೆದಿದ್ದು, ಆಕೆ ಡಿಸೆಂಬರ್ 11 ರಂದು ಏಕಾಏಕಿ ನಾಪತ್ತೆಯಾಗಿದ್ದಳು. ಈ ಘಟನೆಯಿಂದ ನೊಂದು ಸಮಾಜಕ್ಕೆ ಹೆದರಿ ಲೀಲಾಧರ ಶೆಟ್ಟಿ ಮತ್ತು ಅವರ ಪತ್ನಿ ವಸುಂಧರಾ‌ ಶೆಟ್ಟಿ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಘಟನೆಗೆ ಸಂಬಂಧಪಟ್ಟಂತೆ ಕಾಪು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಮತ್ತು‌ ನಾಪತ್ತೆ‌ ಪ್ರಕರಣಗಳು ದಾಖಲಾಗಿದ್ದವು. ಆರೋಪಿ ಗಿರೀಶ್ ವಿರುದ್ದ ಪೋಕ್ಸೋ, ಅತ್ಯಾಚಾರ, ಅಪಹರಣ ಪ್ರಕರಣ ಮತ್ತು ಸ್ನೇಹಿತರ ವಿರುದ್ದ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿದೆ.ಜಿಲ್ಲಾ ಪೋಲಿಸ್ ವರಿಷ್ಟಾದಿಕಾರಿ ಡಾಕ್ಟರ್ ಅರುಣ್ ಕೆ, ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ, ಕಾರ್ಕಳ ಡಿವೈಎಸ್ ಪಿ ಅರವಿಂದ ಕಲ್ಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಪಿ ಎಸ್ ಐ ಅಬ್ದುಲ್ ಖಾದರ್ ಮತ್ತು ತಂಡ ಆರೋಪಿಗಳನ್ನು ಬಂಧಿಸಿದೆ.


Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!