ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಮುಲ್ಕಿ ಅರಮನೆ ಅರಸು ಪ್ರಶಸ್ತಿ ಪ್ರದಾನ; ಸಾಧಕರಿಗೆ ಗೌರವ

ಮುಲ್ಕಿ: ಅರಮನೆ ವೆಲ್ ಫೇರ್ ಮತ್ತು ಚಾರಿಟೆಬಲ್ ಟ್ರಸ್ಟ್ ಹಾಗೂ ಹಳೆಯಂಗಡಿ ಪ್ರಿಯದರ್ಶಿನಿ ಕೋ- ಆಪ ರೇಟಿವ್‌ ಸೊಸೈಟಿ ಆಶ್ರಯದಲ್ಲಿ ಮುಲ್ಕಿ ಸೀಮೆ ಅರಸು ಕಂಬಳದ ಅಂಗವಾಗಿ ಅರಸು ಪ್ರಶಸ್ತಿ ಸಮಾರಂಭ ಪಡು ಪಣಂಬೂರು ಮುಲ್ಕಿ ಅರಮನೆಯ ಕಾಂತಾಬಾರೆ ಬೂದಾಬಾರೆ ಧರ್ಮಚಾವಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು ವಹಿಸಿದ್ದರು. ಮೈಸೂರು ಸಂಸ್ಥಾನದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರು ಕಂಬಳ ಕ್ಷೇತ್ರದಲ್ಲಿನ ಸಾಧನೆಗೆ ದಿ. ಪಯ್ಯೋಟ್ಟು ಸದಾಶಿವ ಸಾಲ್ಯಾನ್ (ಮರಣೋತ್ತರ) ಸಾಮಾಜಿಕ ಕ್ಷೇತ್ರದಲ್ಲಿ ಉತ್ರುಂಜೆ ಭುಜಂಗ ಎಂ. ಶೆಟ್ಟಿ, ತುಳು- ಸಾಂಸ್ಕೃತಿಕ ಕ್ಷೇತ್ರದಲ್ಲಿ ನವೀನ್ ಶೆಟ್ಟಿ ಎಡ್ಮೆಮಾರ್, ಕೃಷಿ ಕ್ಷೇತ್ರದ ಸಾಧಕ ಗಂಗಾಧರ ದೇವಾಡಿಗ, ಕ್ರೀಡಾ ಕ್ಷೇತ್ರದಲ್ಲಿ ಸುಷ್ಮಾ ತಾರಾನಾಥ್, ವೈದ್ಯಕೀಯ ಕ್ಷೇತ್ರದಲ್ಲಿ ಹಳೆಯಂಗಡಿಯ ಡಾ.ಗುರುಪ್ರಸಾದ್ ನಾವಡ ರವರಿಗೆ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

ಮಾಜೀ ಸಚಿವ ಕೆ.ಅಭಯಚಂದ್ರ ಜೈನ್, ಮೈಸೂರಿನ ಡಾ. ಉಮೇಶ್, ಕ್ಯಾ. ಬ್ರಿಜೇಶ್‌ ಚೌಟ, ಗೋಕುಲ್‌ ದಾಸ್ ಪೈ, ಚಿತ್ತ ರಂಜನ್ ಬೋಳಾರ, ದಿವಾಕರ ಕದ್ರಿ, ವಿವೇಕ್ ಆಳ್ವ ಮೂಡುಬಿದಿರೆ, ಡಾ. ಗಣೇಶ್ ಅಮೀನ್ ಸಂಕಮಾರ್, ರಂಜಿತ್ ಕೋಟ್ಯಾನ್ , ಟ್ರಸ್ಟ್ ನ ಗೌತಮ್ ಜೈನ್ ಮುಲ್ಕಿ ಅರಮನೆ, ವಿವೇಕ್ ಆಳ್ವ, ಮೋಹನ್ ದಾಸ್ ಸುರತ್ಕಲ್, ರಾಮಚಂದ್ರ ನಾಯಕ್ ಕೊಲ್ನಾಡು ಗುತ್ತು, ಪ್ರಿಯ ದರ್ಶಿನಿ ಕೋ- ಆಪರೇಟಿವ್‌ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾರ್ಡ್ ಮತ್ತಿತರರು ಉಪಸ್ಥಿತರಿದ್ದರು. ಗಣೇಶ್ ಅಮೀನ್ ಸಂಕಮಾರ್ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!