ಜನ ಮನದ ನಾಡಿ ಮಿಡಿತ

Advertisement

ಉಡುಪಿಗೂ ಲಗ್ಗೆ ಇಟ್ಟಿದೆಯೇ ಖತರ್ನಾಕ್ ಚಡ್ಡಿ ಗ್ಯಾಂಗ್?

ಉಡುಪಿ: ಉತ್ತರ ಭಾರತದ ಖತರ್ನಾಕ್ ಕಳ್ಳರ ಗ್ಯಾಂಗ್‌ ಹೋಲುವ ತಂಡವೊಂದು ಉಡುಪಿಯಲ್ಲಿ ಕೈಚಳಕ ಮಾಡುತ್ತಿರುವ ಬಗ್ಗೆ ಅನುಮಾನ ಮೂಡಿದೆ.


ಉಡುಪಿಯ ಸಂತಕಟ್ಟೆಯ ನವಮಿ ಬೇಕರಿ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡುವಾಗ ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯವೊಂದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಕಳ್ಳರು ಕೇವಲ ಚಡ್ಡಿಯನ್ನು ಹಾಕಿಕೊಂಡು, ಮೈ ತುಂಬಾ ಎಣ್ಣೆ ಹಚ್ಚಿಕೊಳ್ಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಕಚ್ಚಾ ಬನಿಯನ್‌ ಗ್ಯಾಂಗ್ ಅಲಿಯಾಸ್ ಚಡ್ಡಿ ಗ್ಯಾಂಗ್ ಉತ್ತರ ಭಾರತದಲ್ಲಿ ವಿಲಕ್ಷಣ ಮಾದರಿಯಲ್ಲಿ ಕಳ್ಳತನ ನಡೆಸುತ್ತಿತ್ತು. ಸೊಂಟಕ್ಕೆ ಎರಡು ಚಪ್ಪಲಿಯನ್ನು ಸಿಕ್ಕಿಸಿಕೊಂಡು ಕಸುಬಿಗೆ ಇಳಿಯುವ ಈ ತಂಡ, ಕೃತ್ಯ ನಡೆಸಿದ ಸ್ಥಳದಲ್ಲಿ ಒಂದು ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು.
ಉಡುಪಿಯಲ್ಲಿ ಕಂಡುಬಂದ ಈ ತಂಡವೂ ಇಂಥದ್ದಲ್ಲೆವನ್ನೂ ಮಾಡುತ್ತಿದೆ. ಮನೆಮಂದಿ ನಿದ್ದೆಯಲ್ಲಿರುವಾಗ ಬಾಗಿಲನ್ನು ಒಡೆದು ಒಳಪ್ರವೇಶಿಸಿದ ಕಳ್ಳರು ಎರಡೂವರೆ ಲಕ್ಷ ರೂಪಾಯಿ ಮೌಲ್ಯದ ಚಿನ್ನ ಬೆಳ್ಳಿಯನ್ನು ಕದ್ದೊಯ್ದಿದ್ದಾರೆ. ನಗರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!