ಜನ ಮನದ ನಾಡಿ ಮಿಡಿತ

Advertisement

ಮಹಿಳೆಯರ ಬಗ್ಗೆ ಅನಾಗರಿಕ ಪದ ಬಳಸಿದ ಕಲ್ಲಡ್ಕ ಭಟ್ ವಿರುದ್ಧ ಸರಕಾರ ಪ್ರಕರಣ ದಾಖಲಿಸಲಿ: ರಮೇಶ್ ಕಾಂಚನ್ ಒತ್ತಾಯ


ಉಡುಪಿ: ಮುಸ್ಲಿಂ ಮಹಿಳೆಯರ ಬಗ್ಗೆ ಮಾನಹಾನಿಕರವಾಗಿ ಹೇಳಿಕೆ ನೀಡಿ ತನ್ನ ಕೆಟ್ಟ ಮನಸ್ಥಿತಿಯನ್ನು ತೋರಿಸಿರುವ ಕಲ್ಕಡ್ಕ ಪ್ರಭಾಕರ ಭಟ್ ಅವರ ವಿರುದ್ದ ರಾಜ್ಯ ಸರಕಾರ ಕೂಡಲೇ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಕೈಗೊಳ್ಳುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.


“ಯತ್ರ ನಾರೆಸ್ತು ಪೂಜಂತೆ ತತ್ರ ರಮಂತೆ ದೇವತಾ” ಎಂದು ಸದಾ ಮಹಿಳೆಯರ ಬಗ್ಗೆ ಸಂಸ್ಕೃತ ಶ್ಲೋಕಗಳನ್ನು ಬಾಯಿಯಲ್ಲಿ ಹೇಳಿ ಮಹಿಳೆಯರನ್ನು ಹೊಗಳುವ ಆರ್.ಎಸ್.ಎಸ್ ಹಾಗೂ ಅದರ ಸಹಭಾಗಿ ಸಂಘಟನೆಗಳು ಕಲ್ಲಡ್ಕ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವರೇ ? ಕಲ್ಲಡ್ಕ ಪ್ರಭಾಕರ ಭಟ್ ಅವರ ಹೇಳಿಕೆಯು ಮಹಿಳೆಯರ ಅತ್ಯಾಚಾರಕ್ಕಿಂತಲೂ ವಿಕೃತವಾಗಿದ್ದು ಒಬ್ಬ ಮಹಿಳೆಯನ್ನು ದೈಹಿಕವಾಗಿ ಅತ್ಯಾಚಾರ ಮಾಡಿದರಷ್ಟೇ ಅತ್ಯಾಚಾರವಲ್ಲ ಬದಲಾಗಿ ಆಕೆಯನ್ನು ಈ ರೀತಿ ಕೀಳು ಹೇಳಿಕೆಗಳಿಂದ ಬಹಿರಂಗವಾಗಿ ನಿಂದಿಸುವುದು ಕೂಡ ಅತ್ಯಾಚಾರಕ್ಕಿಂತ ದೊಡ್ಡ ಅಪರಾಧವಾಗಿದೆ.

ಮಹಿಳೆ ಯಾವುದೇ ಧರ್ಮಕ್ಕೆ ಸೇರಿದವಳೇ ಆಗಿರಲಿ ಆಕೆ ಯಾವುದೇ ಜಾತಿಗೆ ಸೇರಿದ ಮಹಿಳೆಯಾಗಿರಲಿ ಆಕೆಯನ್ನು ಗೌರವಿಸುದು ಭಾರತದ ಸಂಸ್ಕೃತಿ. ಇಂತಹ ಉತ್ತಮ ಸಂಸ್ಕೃತಿ ಹೊಂದಿರುವ ದೇಶದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಅನಾಗರಿಕರಂತೆ ಮುಸ್ಲಿಂ ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆಯನ್ನು ನೀಡಿರುವುದು ಖಂಡನೀಯ. ಮಹಿಳೆಯರನ್ನು ಪೂಜ್ಯ ಭಾವನೆಯಿಂದ ನೋಡಬೇಕೆಂದು ಹೇಳುವ ಈ ಬಿಜೆಪಿಗರು ಇವರ ಮಾತಿಗೆ ಸಹಮತ ಸೂಚಿಸುವರೇ?


ರಾಜ್ಯ ಸರಕಾರವು ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮುಂದಿನ ದಿನಗಳಲ್ಲಿ ಯಾವುದೇ ಧರ್ಮದ ಮಹಿಳೆಯರ ವಿರುದ್ದ ಇಂತಹ ಅನಾಗರಿಕ ಹೇಳಿಕೆ ನೀಡುವವರಿಗೆ ಕಡಿವಾಣ ಹಾಕುವ ಕೆಲಸವನ್ನು ಮಾಡಬೇಕು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!