ಜನ ಮನದ ನಾಡಿ ಮಿಡಿತ

Advertisement

ತುಂಡುಡುಗೆ ಧರಿಸುತ್ತಿದ್ದ ಮಹಿಳೆ; ಪತ್ನಿಯನ್ನೇ ಕೊಲೆಗೈದ ಪಾಪಿ ಗಂಡ..!!

ತುಂಡುಡುಗೆ ಧರಿಸುತ್ತಿದ್ದಾಳೆ ಎಂಬ ಕಾರಣಕ್ಕೆ ಪತ್ನಿಯನ್ನೇ ಪತಿ ಮುಗಿಸಿದ್ದು, ಬಟ್ಟೆ ಧರಿಸುವ ವಿಚಾರ ಕೊಲೆಯಲ್ಲಿ ಅಂತ್ಯವಾಗಿದೆ. ಪತ್ನಿಯನ್ನು ಪತಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಮಾಡಿದ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.

ಶನಿವಾರ ಸಂಜೆಯು ಸಹ ಮಾಡ್ರನ್‌ ಡ್ರೆಸ್‌ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್‌ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು ಬಳಿಕ ಎಸ್ಕೇಪ್‌ ಆಗಿದ್ದಾನೆ. ಹಾಸನದ ಜೀವನ್‌ ಹಾಗೂ ಧಾರವಾಡದ ಜ್ಯೋತಿ ಅವರು ಪ್ರೀತಿಸಿ ಮದುವೆಯಾಗಿದ್ದರು. ಒಂದು ವರ್ಷದ ಹಿಂದಷ್ಟೇ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಜ್ಯೋತಿ ಅವರು ಮಾಡರ್ನ್‌ ಉಡುಪುಗಳನ್ನು ಧರಿಸುವುದು ಜೀವನ್‌ಗೆ ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆಯೂ ಜಗಳಗಳು ನಡೆಯುತ್ತಿದ್ದವು. ಪತಿಯ ಆಕ್ಷೇಪದ ನಡುವೆಯೂ ಜ್ಯೋತಿ ಅವರು ತುಂಡುಡುಗೆ ಧರಿಸುತ್ತಿದ್ದರು. ಜೀವನ್‌ ಆಕ್ಷೇಪಕ್ಕೆ ಜ್ಯೋತಿ ಸೊಪ್ಪು ಹಾಕುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!