ಜನ ಮನದ ನಾಡಿ ಮಿಡಿತ

Advertisement

ಕೊನೆಗೂ ವಿವಾಹಿತೆಗೆ ವಿಮೋಚನೆ..!!

ಪುತ್ತೂರು : ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ದಿಗ್ಭಂಧನ ಮುಕ್ತಗೊಳಿಸಿ ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಮಂಗಳವಾರ ನಡೆದಿದೆ.

ಶ್ರೀಪತಿ ಹೆಬ್ಬಾರ್ ಎಂಬವರ ಪತ್ನಿ ಆಶಾಲತಾ ಎಂಬವರನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ ೩ ತಿಂಗಳಿನಿAದ ದಿಗ್ಬಂಧನದಲ್ಲಿರಿಸಲಾಗಿದೆ ಎಂದು ಬಂದ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ದಿಗ್ಬಂಧನದಿAದ ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.

ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿ ದಿಗ್ಬಂಧನಕ್ಕೆ ಒಳಪಡಿಸಿದ ಕಾರಣ ತಿಳಿಯಲಾಗುತ್ತಿದೆ .ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರೇತ ಮೈಮೇಲೆ ಬರುವ ನೆಪ…
ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್ ಅವರು ಬಂಟ್ವಾಳ ತಾಲೂಕಿನ ವಿಟ್ಲ ಕಡೆಯವರಾದನ ವಿಶ್ವಕರ್ಮ ಸಮಾಜದ ಆಶಾಲತಾ ಎಂಬವರನ್ನು ಅಂತರ್ಜಾತಿ ವಿವಾಹವಾಗಿದ್ದರು. ಅವರಿಗೆ ಈಗ ೯ ವರ್ಷ ಪ್ರಾಯದ ಪುತ್ರಿ ಇದ್ದಾಳೆ. ಆಶಾಲತಾ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನಲೆಯಲ್ಲಿ ಆಕೆಯನ್ನು ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೇಟ್ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿAದ ಈ ರೀತಿ ದಿಗ್ಭಂಧನದಲ್ಲಿರಿಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು, ಸುದೀರ್ಘ ಅವಧಿಯಲ್ಲಿ ಸ್ನಾನ ಮಾಡಿಸದಿರುವುದರಿಂದ ಸ್ವಚ್ಚತೆಯ ಸಮಸ್ಯೆಯ ಪರಿಣಾಮ ಎದುರಾಗಿತ್ತು ಮಾತ್ರವಲ್ಲದೆ ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ಲಭಿಸಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!