ಜನ ಮನದ ನಾಡಿ ಮಿಡಿತ

Advertisement

ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ-ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾದಂಥ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಪಕ್ಷ ನೇರ ಹೊಣೆಯಾಗುತ್ತದೆ ಎಂದು ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ರಾಮ ಮಂದಿರದ ಉದ್ಘಾಟನೆಗೆ ತೆರಳುವಾಗ ಮತ್ತೊಂದು ಗೋದ್ರಾ ನಡೆಯಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ನೀಡಿರುವ ಹೇಳಿಕೆ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿ.ಕೆ. ಹರಿಪ್ರಸಾದ್ ಅಂಥ ಘಟನೆಯಾಗಲಿದೆ ಅನ್ನೋದಕ್ಕೆ ನನ್ನ ಬಳಿ ಮಾಹಿತಿ ಇದೆ ಎಂದಿದ್ದಾರೆ. ಆ ಮೂಲಕ ಅಂದು ಕರಸೇವೆ ಮಾಡಿ ವಾಪಾಸಾಗುತ್ತಿದ್ದ ವೇಳೆ ಪೆಟ್ರೋಲ್ ಬಾಂಬ್ ಎಸೆದಿರೋದನ್ನು ನೆನೆಪಿಸಿದ್ದಾರೆ. ಗೋದ್ರಾದಂಥ ಘಟನೆ ರಾಜ್ಯದಲ್ಲಿ ಅಥವಾ ದೇಶದಲ್ಲಿ ನಡೆದರೆ ನೇರವಾಗಿ ಕಾಂಗ್ರೆಸ್ ಕಾರಣವಾಗುತ್ತೆ ಎಂದಿದ್ದಾರೆ.
ಈ ಹೇಳಿಕೆಯ ಹಿಂದೆ ಕಾಂಗ್ರೆಸ್ ಬಹುದೊಡ್ಡ ಪಿತೂರಿ ಮಾಡಿದೆ. 2002ರಲ್ಲಿ ಗೋದ್ರಾದಲ್ಲಿ ಭೋಗಿಗೆ ಬೆಂಕಿ ಹಚ್ಚಿದ ಘಟನೆ ಮತ್ತು ಶ್ರೀರಾಮ ಕಾಲ್ಪನಿಕ ಎನ್ನುವಂಥ ಕಾಂಗ್ರೆಸ್ ರಾಮಮಂದಿರ ಉದ್ಘಾಟನಾ ಸಮಯದಲ್ಲಿ ಗೋದ್ರಾದ ಘಟನೆ ಹೇಳುತ್ತಾ ಜನರಲ್ಲಿ ಭಯ ಮೂಡಿಸುವ ಷಡ್ಯಂತ್ರ ಮಾಡಿದೆ. ಇಂಥ ಘಟನೆ ನಡೆಯುತ್ತೆ ಮತ್ತು ಅದಕ್ಕೆ ಆಧಾರ ಇದೆ ಎಂದು ಹೇಳಿದ ಹರಿಪ್ರಸಾದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸರಕಾರ ಸರಿಯಾದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಆಗ್ರಹಿಸಿದರು‌.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!