ಜನ ಮನದ ನಾಡಿ ಮಿಡಿತ

Advertisement

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ಕರ್ನಾಟಕ ಚಾಂಪಿಯನ್: ಆಳ್ವಾಸ್ 8 ಆಟಗಾರ್ತಿಯರು

ಮೂಡುಬಿದಿರೆ: ಮಹಾರಾಷ್ಟ್ರಗಡ್ಚಿರೋಲಿಯಲ್ಲಿ ನಡೆದ 69ನೇ ಮಹಿಳೆಯರ ಹಿರಿಯ ರಾಷ್ಟ್ರೀಯ
ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದು, ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 9ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು.


ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದ್ದು, ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರ್ತಿಯರಿಗೆ ನೀಡುವ ‘ಸ್ಟಾರ್ ಆಫ್ ಇಂಡಿಯಾ’ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜಿನ ಪಲ್ಲವಿ ಬಿ.ಎಸ್. ಹಾಗೂ ಸಹನಾ ಎಚ್.ವೈ. ಮುಡಿಗೇರಿಸಿಕೊಂಡಿದ್ದಾರೆ.


ಕರ್ನಾಟಕ ತಂಡವು ಫೈನಲ್‌ನಲ್ಲಿ ತಮಿಳುನಾಡು ತಂಡವನ್ನು 35-29, ಅಂಕಗಳ ನೇರ ಸೆಟ್‌ಗಳಿಂದ ಮಣಿಸಿ, ಪ್ರಶಸ್ತಿಗೆ ಮುತ್ತಿಕ್ಕಿತ್ತು. ಇದಕ್ಕೂ ಮೊದಲು ನಡೆದ ಸೆಮಿಫೈನಲ್‌ನಲ್ಲಿ 35-11, 35_16 ಅಂಕಗಳಿಂದ ಕೇರಳ ತಂಡಕ್ಕೆ ಸೋಲುಣಿಸಿತು. ವಿಜೇತ ಕರ್ನಾಟಕ ತಂಡ ಹಾಗೂ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಆಳ್ವಾಸ್ ಕಾಲೇಜಿನ ಆಟಗಾರ್ತಿಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!