ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡುಬಿದಿರೆ: ಇಲ್ಲಿನ ಶ್ರೀ ಆದಿಶಕ್ತಿ ಮಹಾಕಾಳಿ ದೇವಸ್ಥಾನದಲ್ಲಿ ಫೆಬ್ರವರಿ 11ರಂದು ನಡೆಯುವ ಸಾನಿಧ್ಯ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಚೇರಿ ಉದ್ಘಾಟನೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದ ಆವರಣದಲ್ಲಿ ನಡೆಯಿತು.


ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆ ವಹಿಸಿ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು ಮೂಡುಬಿದಿರೆ ಸುತ್ತಮುತ್ತಲಿನ 18 ಗ್ರಾಮಗಳಿಗೆ ಸಂಬಂಧಿಸಿದ ಈ ದೇವಸ್ಥಾನ ಕೇವಲ ಧಾರ್ಮಿಕ ಚಿಂತನೆಯನ್ನು ಮೂಡಿಸುವ ಪೂಜಾ ಕೇಂದ್ರವಾಗಿರದೆ ಶಾಸ್ತ್ರೀಯ ಚೌಕಟ್ಟಿನೊಂದಿಗೆ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿವೆ. ಕೀರ್ತಿಶೇಷರಾದ ಮುಂಡ್ರುದೆಗುತ್ತು ರಾಮ್ ಮೋಹನ್ ರೈ, ಅಮರನಾಥ ಶೆಟ್ಟಿ ಮತ್ತು ಪುತ್ತಿಗೆ ಗುತ್ತು ವಸಂತ ಶೆಟ್ಟಿ ಮತ್ತಿತರ ಪ್ರಮುಖರು ಈ ದೇವಸ್ಥಾನಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬ್ರಹ್ಮಕಲಶೋತ್ಸವವನ್ನು ನಡೆಸಿ ದೇವಸ್ಥಾನದ ಹಿರಿಮೆಯನ್ನು ಮುಂದುವರಿಸೋಣ ಎಂದರು.
ಮಾಜಿ ಸಚಿವ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ಅಭಯಚಂದ್ರ ಜೈನ್ ಮಾತನಾಡಿ ಆದಿಶಕ್ತಿ ಮಹಾಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ಕೆ.ಶ್ರೀಪತಿ ಭಟ್,ಸಮಿತಿ ಪ್ರಮುಖರಾದ ನಾರಾಯಣ ಪಿ.ಎಂ, ಸುದರ್ಶನ್ ಎಂ., ಚಂದ್ರಶೇಖರ್ ಎಂ, ಮೂಡುಬರ್ಕೆ ಗೀತಾ ಅಂಚನ್ ಮತ್ತಿತರರು ಉಪಸ್ಥಿತರಿದ್ದರು. ಸಮಿತಿ ಪ್ರಧಾನ ಕಾರ್ಯದರ್ಶಿ ತೋಡಾರು ದಿವಾಕರ ಶೆಟ್ಟಿ ನಿರೂಪಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!