ಜನ ಮನದ ನಾಡಿ ಮಿಡಿತ

Advertisement

‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ನಿಧನ

“ಯಕ್ಷರಂಗದ ರಾಜ” ಎಂದೇ ಖ್ಯಾತರಾದ, ಹೆಸರಾಂತ ಯಕ್ಷಗಾನ ಕಲಾವಿದ ಪೆರುವಾಯಿ ನಾರಾಯಣ ಶೆಟ್ಟಿ(82) ಅವರು ನಿಧನರಾಗಿದ್ದಾರೆ.

ತೆಂಕುತಿಟ್ಟಿನ ಯಕ್ಷರಂಗದಲ್ಲಿ ತನ್ನದೇ ಛಾಪನ್ನು ನಿರ್ಮಿಸಿದ ಕನ್ನಡ -ತುಳು ಭಾಷೆಯ ಪ್ರಸಂಗಗಳಲ್ಲಿ ಏಕಪ್ರಕಾರ ಮಿಂಚಿದ ಪೆರುವಾಯಿ ನಾರಾಯಣ ಶೆಟ್ಟರು, ಕಂಚಿನ ಧ್ವನಿ, ಶ್ರುತಿಬದ್ಧ ಮಾತು ಹಾಗೂ ಅರ್ಥಪೂರ್ಣ ಸಂಭಾಷಣೆಗೆ ಹೆಸರಾಗಿದ್ದರು.ಬಂಟ್ವಾಳ ತಾಲೂಕು ಪೆರುವಾಯಿ ಇವರ ಹುಟ್ಟೂರು. ಮದನಪ್ಪ ಶೆಟ್ಟಿ ಮತ್ತು ಅಬ್ಬಕ್ಕ ದಂಪತಿಗಳ ಸುಪುತ್ರರಾಗಿದ್ದ ಇವರು, 12ನೇ ವಯಸ್ಸಿನಲ್ಲೇ ಯಕ್ಷಗಾನದಲ್ಲಿ ತೊಡಗಿಸಿಕೊಂಡಿದ್ದರು. ಮಡಾವು, ಧರ್ಮಸ್ಥಳ, ಕರ್ನಾಟಕ, ಪೊಳಲಿ ರಾಜರಾಜೇಶ್ವರಿ ಮೇಳ, ಕದ್ರಿ, ಕುಂಬಳೆ, ಕುಂಟಾರು, ಕಟೀಲು ಹೀಗೆ ವಿವಿಧ ಯಕ್ಷಗಾನ ಮಂಡಳಿಗಳಲ್ಲಿ ತಿರುಗಾಟ ಮಾಡಿದ ಪೆರುವಾಯಿ ನಾರಾಯಣ ಶೆಟ್ಟಿ ಅವರದು ಬಹುದೊಡ್ಡ ಸಾಧನೆ. ಅವರು ಸುಮಾರು 52 ವರ್ಷ ಗಳ ಕಾಲ ನಿರಂತರ ತಿರುಗಾಟ ನಡೆಸಿದ್ದರು. ಬಳಿಕ ಅನಾರೋಗ್ಯದಿಂದಾಗಿ ಯಕ್ಷರಂಗದಿಂದ ನಿವೃತ್ತಪಡೆದಿದ್ದರು.ಕಟೀಲುಮೇಳದ ಕಲಾವಿದರಾಗಿದ್ದ ಅವರು ನಿರ್ವಹಿಸುತ್ತಿದ್ದಾಗ ರಕ್ತಬೀಜ, ಹಿರಣ್ಯಕಷ್ಯಪು, ಕಂಸ, ಸುಂದರರಾವಣ, ಋತುಪರ್ಣ, ಹನೂಮಂತ, ಜಾಬಾಲಿ, ಅರುಣಾಸುರ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಹಲವು ಪಾತ್ರಗಳನ್ನು ಬಹಳ ಪರಿಣಾಮಕಾರಿಯಾಗಿ ರಂಗದಲ್ಲಿ ಬಿಂಬಿಸಿ ಖ್ಯಾತರಾದವರು. ಕೋಟಿ ಚೆನ್ನಯದ ಕೋಟಿ ಮೊದಲಾದ ವೇಷಗಳ ನಿರ್ವಹಣೆಯಲ್ಲಿ “ಪೆರುವಾಯಿ ಶೈಲಿ’ ಎಂಬ ಹೊಸ ಹಾದಿಯನ್ನು ನಿರ್ಮಿಸಿದ ಕೀರ್ತಿವಂತ.ತುಳು ಪ್ರಸಂಗಗಳ ಪಾತ್ರನಿರ್ವಹಣೆಯಲ್ಲೂ ವೈಶಿಷ್ಟ್ಯತೆಯನ್ನು ಮೆರೆದವರು. ಇವರ ಕೋಟಿ, ದೇವುಪೂಂಜ ಮುಂತಾದ ಪಾತ್ರಗಳು ಬಹಳ ಪ್ರಸಿದ್ಧ ಪಡೆದಿತ್ತು. 2016ನೇ ಸಾಲಿನ ಚೊಚ್ಚಲ “ಯಕ್ಷಧ್ರುವ ಪಟ್ಲ ಪ್ರಶಸ್ತಿ” ಸೇರಿದಂತೆ ಹಲವು ಸನ್ಮಾನ ಇವರಿಗೆ ಸಂದಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!