ಜನ ಮನದ ನಾಡಿ ಮಿಡಿತ

Advertisement

ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.10 ಲಕ್ಷ ರೂ ವಂಚನೆ; ಪ್ರಕರಣ ದಾಖಲು  

ಉಪ್ಪಿನಂಗಡಿ; ಉದ್ಯೋಗದ ನೆಪದಲ್ಲಿ ಯುವಕನೋರ್ವನಿಗೆ 2.10 ಲಕ್ಷ ರೂ. ವಂಚಿಸಿದ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಳಿಯೂರು ಗ್ರಾಮದ ನಿವಾಸಿ ಭವಿತ್ ಕೆ.ಎನ್ (23) ಅವರು ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು, ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾಗ ಸಾಮಾಜಿಕ ಜಾಲತಾಣದ (ಇನ್ಟಾಗ್ರಾಮ್) ಮೂಲಕ ಆರೋಪಿತ ವ್ಯಕ್ತಿ ಪ್ರಜ್ವಲ್ ಪರಿಚಯವಾಗಿದೆ.

ಇವರಿಬ್ಬರು ೨೦೨೩ ರ ಜೂನ್ ೫ ರಂದು ಬೆಂಗಳೂರಿನಲ್ಲಿ ಇಬ್ಬರು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಈ ವೇಳೆ ಪ್ರಜ್ವಲ್ ಮೆರೈನ್ ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಈ ಉದ್ಯೋಗಕ್ಕೆ 3 ಲಕ್ಷ ರೂ. ಖರ್ಚಾಗುತ್ತದೆ ಎಂದು ತಿಳಿಸಿದ್ದ. ಬಳಿಕ ಭವಿತ್ ಖಾತೆಯಿಂದ ಜೂ ೧೮ ರಿಂದ ೨೮ ರ ಅವಧಿಯಲ್ಲಿ ಹಂತ-ಹಂತವಾಗಿ, ಒಟ್ಟು 2.10 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡಿರುತ್ತಾನೆ. ಬಳಿಕ ಪ್ರಜ್ವಲ್, ನಿಮಗೆ ಕೆಲಸ ಮಾಡಿಕೊಡಲು ಆಗುವುದಿಲ್ಲ 10 ದಿವಸದೊಳಗೆ ಹಣವನ್ನು ಹಿಂತಿರುಗಿಸುವುದಾಗಿ ನಂಬಿಸಿ, ಈವರೆಗೆ ಕೆಲಸವನ್ನು ಮಾಡಿಕೊಡದೆ, ಪಡೆದಿರುವ ಹಣವನ್ನೂ ಹಿಂತಿರುಗಿಸದೇ, ಮೋಸ ಮಾಡಿದ್ದಾನೆ ಎಂದು ಭವಿತ್ ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

error: Content is protected !!