ಜನ ಮನದ ನಾಡಿ ಮಿಡಿತ

Advertisement

ಬೂತ್ ಮಟ್ಟದಿಂದ ಪಕ್ಷದ ಕಾರ್ಯಕ್ರಮ, ಯೋಜನೆ ಅನುಷ್ಠಾನ-ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬ್ರಿಜೇಶ್ ಚೌಟ.

ಪುತ್ತೂರು: ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಬಿಜೆಪಿಯಲ್ಲಿ ಹೊಸ ತಂಡಗಳು ರಚನೆಯಾಗಿದ್ದು, ಮುಂದಿನ ದಿನಗಳಲ್ಲಿ ಹಳೆಯ ತಂಡ ಮತ್ತು ಹೊಸ ತಂಡ ಜೊತೆಗೂಡಿ ಪಕ್ಷದ ಸಂಘಟನೆಯ ಕೆಲಸ ಮಾಡಲಿದೆ. ಪಕ್ಷದ ಕಾರ್ಯಕ್ರಮ, ಯೋಜನೆಗಗಳನ್ನು ಯಶಸ್ವಿಯಾಗಿ ಬೂತ್ ಮಟ್ಟದಿಂದ ಅನುಷ್ಠಾನಕ್ಕೆ ತರಲಿದ್ದೇವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ ಹೇಳಿದ್ದಾರೆ.

ಅವರು ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಬಳಿಕ ಪ್ರಥಮ ಭಾರಿಗೆ ಬುಧವಾರ ಪುತ್ತೂರಿಗೆ ಭೇಟಿ ನೀಡಿದರು. ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದರು. ವಿಜಯೇಂದ್ರ ಅವರು ರಾಜ್ಯದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಹೊಸ ತಂಡ ರಚನೆಯಾಗಿದೆ. ಜಿಲ್ಲೆಯ ಅಧ್ಯಕ್ಷರ ಘೋಷಣೆಯೂ ಆಗಿದೆ. ತಿಂಗಳ ಅಂತ್ಯದೊಳಗೆ ಎಲ್ಲಾ ಮಂಡಲ, ಮೋರ್ಚಾಗಳ ತಂಡ ರಚನೆಯಾಗಲಿದೆ. ಬಳಿಕ ನಮ್ಮೆಲ್ಲರ ಗುರಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಚುನಾಯಿತಗೊಳಿಸುವ ಗುರಿಯೊಂದೇ ಆಗಿದೆ. ಹೊಸ ತಂಡ ಮತ್ತು ಹಿಂದಿದ್ದ ತಂಡ ಜೊತೆಯಾಗಿ ಚುನಾವಣೆಯಲ್ಲಿ ಕೆಲಸ ಮಾಡಲಿದ್ದೇವೆ. ಹಾಗಾಗಿ ಎಲ್ಲರೂ ಸಂಕಲ್ಪ ಇಟ್ಟುಕೊಂಡು ಕೆಲಸವನ್ನು ಮುಂದಿನ ಎರಡು ಮೂರು ತಿಂಗಳು ಮಾಡಲಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!