ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ: ಗ್ಯಾಸ್ ಟ್ಯಾಂಕರ್ ಅಪಘಾತ; ಚಾಲಕ ಗಂಭೀರ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ನವಯುಗ ಕಂಪೆನಿಯ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ.


ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದು, ಬ್ರಹ್ಮಾವರ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಎದುರಿನಲ್ಲಿದ್ದ ನವಯುಗ ಕಂಪೆನಿಯ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾದ ಬಳಿಕ ಟ್ಯಾಂಕರ್ ಅಲ್ಲೇ ಮುಂದೆ ಸಾಗಿ ನಿಂತಿದಿದೆ. ಎರಡು ಅಡಿ ಮುಂದೆ ಸಾಗುತ್ತಿದ್ದರೆ ಅಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಮುಂದೆ ಇದ್ದ ಮನೆ ಮೇಲೆ ಬೀಳುವ ಅಪಾಯ ಇತ್ತೆಂದು ಎನ್ನಲಾಗಿದೆ. ಅದೃಷ್ಟವಶಾತ್ ಈ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!