ಜನ ಮನದ ನಾಡಿ ಮಿಡಿತ

Advertisement

ಉಡುಪಿಯಲ್ಲಿ ‘ಜಿಲ್ಲಾ ಮಟ್ಟದ ದೇವಸ್ಥಾನಗಳ ಪರಿಷತ್ತು’

ಡ್ರೆಸ್ ಕೋಡ್, ಭೂಮಿ ಅತಿಕ್ರಮಣ, ಸರಕಾರೀಕರಣದಿಂದ ಮುಕ್ತ ವಿಷಯದ ಕುರಿತು ಚರ್ಚೆ

ಉಡುಪಿ: ಹಿಂದೂ ಜನಜಾಗೃತಿ ಸಮಿತಿ ಮತ್ತು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯುಕ್ತ ಆಶ್ರಯದಲ್ಲಿ ದೇವಸ್ಥಾನ, ಸಂಸ್ಕೃತಿಯ ರಕ್ಷಣೆಗಾಗಿ ‘ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು’ ಅನ್ನು ಇದೇ ಬರುವ ಫೆ. 11ರಂದು ಉಡುಪಿ ಕಿದಿಯೂರು ಹೋಟೆಲ್ ನ ಮಾಧವ ಕೃಷ್ಣ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಉಡುಪಿ ಜಿಲ್ಲಾ ಸಂಯೋಜಕ‌ ಚಂದ್ರ ಮೊಗವೀರ ಹೇಳಿದರು.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪರಿಷತ್ತಿನಲ್ಲಿ ಜಿಲ್ಲೆಯ ಅನೇಕ ಕಡೆಗಳಿಂದ 300ಕ್ಕಿಂತ ಹೆಚ್ಚು ವಿಶ್ವಸ್ಥರು ಉಪಸ್ಥಿತರಿರಲಿದ್ದಾರೆ. ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಆಯ್ದ ವಿವಿಧ ವಿಷಯಗಳ ಚರ್ಚಾಕೂಟಗಳು ನಡೆಯಲಿವೆ. ಇದರಲ್ಲಿ ‘ದೇವಸ್ಥಾನಗಳನ್ನು ಸನಾತನ ಧರ್ಮಪ್ರಸಾರ ಕೇಂದ್ರಗಳನ್ನಾಗಿಸುವುದು’, ‘ದೇವಸ್ಥಾನಗಳನ್ನು ಸರಕಾರೀಕರಣದಿಂದ ಮುಕ್ತಮಾಡುವುದು,’ ಅನಧಿಕೃತ ಹೆಸರಿನಲ್ಲಿ ದೇವಸ್ಥಾನಗಳನ್ನು ಧ್ವಂಸಗೊಳಿಸುವುದು, ಅನ್ಯಮತೀಯರಿಂದ ದೇವಸ್ಥಾನಗಳ ಭೂಮಿಯ ಅತಿಕ್ರಮಣ ಮತ್ತು ಸರಕಾರವು ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದರ ವಿರುಧ್ಧ ಪರಿಹಾರೋಪಾಯ, ದೇವಸ್ಥಾನ ಮತ್ತು ತೀರ್ಥಕ್ಷೇತ್ರಗಳ ಪರಿಸರದಲ್ಲಿ ಮದ್ಯ-ಮಾಂಸ ಇವುಗಳ ನಿಷೇಧ ಮುಂತಾದ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ ಎಂದರು.

ಮಹಾಸಂಘವು ಕೇವಲ 6 ತಿಂಗಳುಗಳಲ್ಲಿ ದೇಶದಾದ್ಯಂತ 275 ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ(ಡ್ರೆಸ್ ಕೋಡ್) ಜಾರಿಗೆ ತಂದಿದೆ. ಮಹಾಸಂಘದ ಅಭಿಯಾನದಿಂದ ಪ್ರೇರಿತಾರದ ಅನೇಕ ವಿಶ್ವಸ್ಥರು ತಮ್ಮ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಜಾರಿಗೊಳಿಸುತ್ತಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕೆರ್ವಾಸೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ರಮೇಶ ಕಾರ್ಣಿಕ್, ಅಂಬಾಗಿಲು ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಸಹ ಮೊಕ್ತೇಸರ ರಾಜೇಶ್ ಶೇಟ್, ಉಡುಪಿ ಜಿಲ್ಲಾ ಸಮಿತಿ ಸೇವಕ ವಿಶ್ವನಾಥ ನಾಯಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!