ಜನ ಮನದ ನಾಡಿ ಮಿಡಿತ

Advertisement

ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ರಾಜಗೋಪುರದ ಉದ್ಘಾಟನಾ ಕಾರ್ಯಕ್ರಮ

ಹಳೆಯಂಗಡಿ : ಶ್ರೀ ಕೋಡ್ದಬ್ಬು ದೈವಸ್ಥಾನ 10ನೇ ತೋಕೂರು ಇಲ್ಲಿ ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ 2020-21ನೇ ಸಾಲಿನ ರೂ-5,00,000/- ಅನುದಾನದಲ್ಲಿ ನಿರ್ಮಾಣಗೊಂಡ ನೂತನ ರಾಜಗೋಪುರದ ಉದ್ಘಾಟನಾ ಕಾರ್ಯಕ್ರಮವು ದೈವಸ್ಥಾನದಲ್ಲಿ ನೆರವೇರಿತು.


ನೂತನ ರಾಜಗೋಪುರದ ಉದ್ಘಾಟನೆ ಮತ್ತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಉಮಾನಾಥ ಎ.ಕೋಟ್ಯಾನ್ ರವರು ವಹಿಸಿದ್ದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತೋಕೂರು ಇಲ್ಲಿನ ಆಡಳಿತಾಧಿಕಾರಿಗಳಾದ ಶ್ರೀ ದಿಲೀಪ್ ರೋಡ್ಕರ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ವಿನೋದ್ ಕುಮಾರ್ ಬೊಳ್ಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು ಉಪಾಧ್ಯಕ್ಷರಾದ ಶ್ರೀ ಹೇಮನಾಥ ಅಮೀನ್, ಶ್ರೀಮತಿ ಶಕುಂತಲಾ ಜೆ ಶೆಟ್ಟಿ ತೋಕೂರು ಗುತ್ತು, ಪಡುಪಣಂಬೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್, ತೋಕೂರು ಶ್ರೀ ಸುಬ್ರಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಹರಿದಾಸ್ ಭಟ್ , ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನ ಕಲ್ಲಾಪು ಇಲ್ಲಿನ ಗುರಿಕಾರರಾದ ಶ್ರೀ ರತ್ನಾಕರ ಶೆಟ್ಟಿಗಾರ್ ಯಾನೆ ಕಾಂತಣ್ಣ ಗುರಿಕಾರ, ಓಂಕಾರೇಶ್ವರಿ ಮಂದಿರ 10ನೇ ತೋಕೂರು ಇಲ್ಲಿನ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀ ಅನಿಲ್ ಮತ್ತು ಶ್ರೀ ಸಂತೋಷ್ ಕುಮಾರ್, ಶ್ರೀ ಕೋಡ್ದಬ್ಬು ದೈವಸ್ಥಾನ ತೋಕೂರು ಇಲ್ಲಿನ ಗುರಿಕಾರರಾದ ಶ್ರೀ ಗಂಗಾಧರ ಗುರಿಕಾರ ಮತ್ತು ಅಧ್ಯಕ್ಷರಾದ ಶ್ರೀ ವಾಸು ಅಂಚನ್ ರವರು ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಡಾ. ಬಿಆರ್ ಅಂಬೇಡ್ಕರ್ ನ್ಯಾಷನಲ್ ಫೆಲೋಶಿಪ್ ಪ್ರಶಸ್ತಿ -2023 ಪುರಸ್ಕೃತರಾದ ಶ್ರೀ ಭೋಜಪಾತ್ರಿ, ಕೋಡ್ದಬ್ಬು ದೈವಸ್ಥಾನಕ್ಕೆ ಸ್ಥಳದಾನವನ್ನು ನೀಡಿದ ಶ್ರೀ ಸುರೇಂದ್ರ ಕೆ. ಕೋಟ್ಯಾನ್, ದೈವಸ್ಥಾನಕ್ಕೆ ನೂತನ ದೈವದ ಶಾಶ್ವತ ಚಪ್ಪರವನ್ನು ಕೊಡುಗೆಯಾಗಿ ನೀಡಿದ ಶ್ರೀ ಗೋಪಾಲಕೃಷ್ಣ ಸಾಲ್ಯಾನ್ ಮತ್ತು ಶೌಚಾಲಯಕ್ಕೆ ಸ್ಥಳಾವಕಾಶವನ್ನು ಒದಗಿಸಿಕೊಟ್ಟ ಶ್ರೀ ಜುಬೇರ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಊರಿನ ಹತ್ತು ಸಮಸ್ತರ ಪರವಾಗಿ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ರವರಿಗೆ ಅಭಿಮಾನ ಪೂರಕವಾದ ಗೌರವಾರ್ಪಣೆಯನ್ನು ನೆರವೇರಿಸಲಾಯಿತು.


ಕಾರ್ಯಕ್ರಮದಲ್ಲಿ ಭಕ್ತಿ ಬಿ ಅಮೀನ್ ರವರು ಪ್ರಾರ್ಥನೆಯನ್ನು ನೆರವೇರಿಸಿ, ಸುರೇಶ್ ಶೆಟ್ಟಿಯವರು ಸ್ವಾಗತಿಸಿ, ಸಂತೋಷ್ ದೇವಾಡಿಗರವರು ಧನ್ಯವಾದವನ್ನು ಅರ್ಪಿಸಿದರು. ಕಾರ್ಯಕ್ರಮವನ್ನು ಶ್ರೀ ಭಾಸ್ಕರ್ ಅಮೀನ್ ತೋಕೂರುರವರು ನಿರೂಪಿಸಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!