ಜನ ಮನದ ನಾಡಿ ಮಿಡಿತ

Advertisement

ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಅಕ್ಷಯ್‌ ರೈ ದಂಬೆಕಾನ ಆಯ್ಕೆ

ಪುತ್ತೂರು ಮೂಲದ ಅಕ್ಷಯ್‌ ರೈ ದಂಬೆಕಾನ ರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಆಯ್ಕೆಯಾಗಿದ್ದಾರೆ. ರಾಜ್ಯ ಸಾಮಾಜಿಕ ಜಾಲತಾಣದ ರಾಜ್ಯ ಸಂಚಾಲಕರಾದ ಪ್ರಶಾಂತ್‌ ಮಾಕ್ನೂರುರವರು ಇಂದು ಘೋಷಿಸಿರುತ್ತಾರೆ.

ಕಳೆದ ಹನ್ನೆರಡು ವರ್ಷಗಳ ಕಾಲ ಬಿಜೆಪಿ ಯುವಮೋರ್ಚಾದ ಮಂಡಲ ಜಿಲ್ಲೆ ಹಾಗೂ ರಾಜ್ಯದ ಹಲವಾರು ಜವಬ್ದಾರಿಯನ್ನು ನಿಭಾಯಿಸಿ, ಬೆಂಗಳೂರು ಜಿಲ್ಲೆ ಖಜಾಂಜಿಯಾಗಿ ನಂತರ ರಾಜ್ಯದ ಕಾರ್ಯಕಾರಿಣಿ ಸದಸ್ಯರಾಗಿ ತದನಂತರ ಮಾಧ್ಯಮದ ಸಂಚಾಲಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಚುಣಾವಣೆಯ ತಮಿಳುನಾಡು ರಾಜ್ಯದ ವಿಧಾನ ಸಭಾ ಚುಣಾವಣೆಯ ಸಂದರ್ಭದಲ್ಲಿ ಕನ್ಯಾಕುಮಾರಿ ಜಿಲ್ಲೆಯ ಕೊಲಚ್ಚಿಲ್‌ ಮತ್ತು ನಾರಗಕೋವಿ ಕ್ಷೇತ್ರಗಳ ಪ್ರಭಾರಿಯಾಗಿ ಕೆಲಸ ಮಾಡಿರುತ್ತಾರೆ. ತದನಂತರ ಹಲವಾರು ಎಂ ಎಲ್ ಎ ಮತ್ತು ಎಂಎಲ್ಸಿ ಚುನಾವಣೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಪ್ರಭಾರಿಯಾಗಿ ಕೆಲಸ ಮಾಡಿದ್ದು, ಇವರ ಮೇಲೆ ಹಲ್ಲೆ ನಡೆದಿದ್ದು,ಈ ಬಗ್ಗೆ ದಾಖಲಾಗಿತ್ತು.

ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಲವಾರು ಜವಬ್ಧಾರಿಗಳನ್ನು ನಿಭಾಯಿಸಿಕೊಂಡು ಬಂದಿರುವ ಅಕ್ಷಯ್‌ ರೈ ದಂಬೆಕಾನರವರಿಗೆ ಈ ಬಾರಿ ವಿಜಯೇಂದ್ರರವರ ಭಾರತೀಯ ಪಕ್ಷದ ತಂಡದಲ್ಲಿ ಉನ್ನತ ಸ್ಥಾನ ದೊರಕಿರುವುದು ಇವರ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ. ಅಕ್ಷಯ್‌ ರೈ ದಂಬೆಕಾನರವರು ಭಾರತೀಯ ಜನತಾ ಪಕ್ಷದ ರಾಜ್ಯ ಸೋಶಿಯಲ್‌ ಮೀಡಿಯಾ ಕೋ-ಕನ್ವಿನರ್ ಆಗಿ ಇಂದಿನಿಂದ ಕಾರ್ಯನಿರ್ವಹಿಸಲಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!