ಜನ ಮನದ ನಾಡಿ ಮಿಡಿತ

Advertisement

ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ

ಬಂಟ್ವಾಳ: ಬಂಟ್ಚಾಳ ತಾಲೂಕು ಮಟ್ಟದ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ಬಿಸಿರೋಡಿನ ಕಂದಾಯ ಇಲಾಖೆಯಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶಿಲ್ದಾರ್ ಅರ್ಚನಾ ಭಟ್ ವಹಿಸಿ ಮಾತನಾಡಿ, ಸರ್ವಜ್ಞ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಅವರು ಸರ್ವರಿಗೂ ಆದರ್ಶಪ್ರಾಯವಾದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದ್ದಾರೆ. ಸರ್ವಜ್ಞನ ಶ್ರೇಷ್ಠ ಜ್ಞಾನವನ್ನು ಮುಂದಿನ ಜನಾಂಗಕ್ಕೆ ಹೇಗೆ ತಿಳಿಸಿಕೊಡಬಹುದು ಎಂಬ ವಿಚಾರದ ಬಗ್ಗೆ ಯೋಚನೆ ಮಾಡಬೇಕಾಗಿದೆ.‌ ಸರಕಾರ ಇಂತಹ ಶ್ರೇಷ್ಠ ವ್ಯಕ್ತಿಗಳ ಆಚರಣೆ ಮಾಡಿರುವ ಸಂಗತಿ ಅತ್ಯಂತ ಸಂತಸದ ವಿಚಾರ ಎಂದು ತಿಳಿಸಿದರು.

ವಕೀಲರಾದ ಸುರೇಶ್ ನಾವೂರ ಮಾತನಾಡಿ, ಸಮಾಜದ ಅಂಕುಡೊಂಕುಗಳ ನಿವಾರಣೆಗಾಗಿ ಹೋರಾಟ ಮಾಡಿದ ಮಹಾನುಭಾವ ಸರ್ವಜ್ಞರು ಎಂದು ಅವರು ತಿಳಿಸಿದರು. ಇಂತಹ ಶ್ರೇಷ್ಠ ವ್ಯಕ್ತಿಗಳ ವ್ಯಕ್ತಿತ್ವವನ್ನು, ಆದರ್ಶಗಳನ್ನು ಅಳವಡಿಸಿಕೊಂಡರೆ ಜೀವನ ಮೌಲ್ಯ ವೃದ್ದಿಯಾಗುತ್ತದೆ,ಕಾರ್ಯಕ್ರಮಗಳು ಅರ್ಥಪೂರ್ಣವಾಗಬಹುದು ಎಂದು ಅವರು ತಿಳಿಸಿದರು. ವೇದಿಕೆಯಲ್ಲಿ ಹಿರಿಯ ನಾಗರಿಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಯ್ಯ ಹನೈನಡೆ, ಬಂಟ್ವಾಳ ‌ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಯುವ ವೇದಿಕೆ ಅದ್ಯಕ್ಷ ನಿತೀಸ್ ಪಲ್ಲಿಕಂಡ, ರಾಜ್ಯ ಕುಲಾಲ ಕುಂಬಾರ ಮಹಿಳಾ ಸಂಘದ ಅದ್ಯಕ್ಷೆ ನಳಿನಿಮಹಾಬಲ ಯುವ ವೇದಿಕೆ ಮಹಿಳಾ ಸಂಘದ ಅಧ್ಯಕ್ಷೆ ವಿಜಯಶ್ರೀ ಪುರುಷೋತ್ತಮ , ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ಉಪತಹಶೀಲ್ದಾರ್ ದಿವಾಕರ ‌ಮುಗುಳಿಯ, ಕಂದಾಯ ನಿರೀಕ್ಷಕ ವಿಜಯ ಆರ್,ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕಂದಾಯ ನಿರೀಕ್ಷಕ ಜನಾರ್ದನ ಜೆ.ಸ್ವಾಗತಿಸಿದರು. ಶ್ರೀಕಲಾ ವಂದಿಸಿದರು. ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!