ಪಾಕಿಸ್ತಾನದ ಪರ ಘೋಷಣೆ ಖಂಡಿಸಿ ಪುತ್ತೂರು ಬಿಜೆಪಿಯಿಂದ ನಾಸೀರ್ ಹುಸೇನ್ ಪ್ರತಿಕೃತಿ ದಹಿಸಿ ಆಕ್ರೋಶ

ಪುತ್ತೂರು: ವಿಧಾನಸೌದದಲ್ಲಿ ಫೆ. ೨೭ರಂದು ಸಂಜೆ ರಾಜ್ಯ ಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಆರೋಪಿಸಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಪುತ್ತೂರು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ಮುಂಭಾಗ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿದರು.ಬಿಜೆಪಿಯ ಹಲವು ಮುಖಂಡರು ಮಾತನಾಡಿದರು. ಬಿಜೆಪಿ ಕಾರ್ಯಕರ್ತರ ಘೋಷಣೆ ಮುಗಿಲುಮುಟ್ಟಿತ್ತು.



