ಮುಲ್ಕಿ: ಹಿರಿಯ ಪತ್ರಕರ್ತ, ಕಾರ್ಯಕ್ರಮ ನಿರೂಪಕ ಮನೋಹರ ಪ್ರಸಾದ್ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತು ತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಮಾಧ್ಯಮದ ಜೊತೆ ಮಾತನಾಡಿ ಪತ್ರಕರ್ತ ಮನೋಹರ ಪ್ರಸಾದ್ ರವರು ಕಳೆದ 36 ವರ್ಷಗಳಿಂದ ಪ್ರತಿಷ್ಠಿತ ಉದಯವಾಣಿ ಪತ್ರಿಕೆಯ ವರದಿಗಾರರಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡಲು ಬಹಳಷ್ಟು ಪ್ರಯತ್ನಿಸಿ ಯಶಸ್ವಿಯಾಗಿದ್ದರು ತಮ್ಮ ವಾಕ್ಚಾತುರ್ಯದಲ್ಲಿ ಕಾರ್ಯಕ್ರಮ ನಿರೂಪಣೆ ಮೂಲಕ ಬಹಳಷ್ಟು ಅಭಿಮಾನಿಗಳ ಮನಸ್ಸು ಗೆದ್ದಿದ್ದರು. ಕರ್ನಾಟಕ ರಾಜ್ಯೋತ್ಸವ ಸಹಿತ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದ ಅವರು ಸಮಾಜದ ಆಸ್ತಿಯಾಗಿ ಯುವ ಜನಾಂಗಕ್ಕೆ ಮಾದರಿಯಾಗಿದ್ದರು ಎಂದರು
ಅವರ ನಿಧನಕ್ಕೆ ವೇ.ಮೂ. ವಾದಿರಾಜ ಉಪಾಧ್ಯಾಯ ಕೊಲಕಾಡಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತ ಅರಸರು,ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕಸಾಪ ಮಾಜೀ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಕಂಬಳ ಸಮಿತಿಯ ಅಧ್ಯಕ್ಷ ಬೆಳಪು ಡಾ. ದೇವಿ ಪ್ರಸಾದ್ ಶೆಟ್ಟಿ , ಕೆಪಿಸಿಸಿ ಕೋಆರ್ಡಿನೇಟರ್, ವಸಂತ ಬೆರ್ನಾಡ್,
ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ,, ಹಳೆಯಂಗಡಿ ಪಿಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಭಟ್ ಕೊಳುವೈಲು, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್ ಪುನರೂರು, ಬಪ್ಪನಾಡು
ಲಯನ್ಸ್ ಕ್ಲಬ್ ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಮಾಜೀ ಧಾರ್ಮಿಕ ಪರಿಷತ್ ಸದಸ್ಯರಾದ ಗಿರಿ ಪ್ರಕಾಶ್ ತಂತ್ರಿ ಪೊಳಲಿ, ಭುವನಾಭಿರಾಮ ಉಡುಪ ಕಿನ್ನಿಗೋಳಿ, ಅವಿಭಾಜಿತ ದಕ ಹಾಗೂ ಉಡುಪಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ, ಮುಲ್ಕಿ ವಿಜಯ ರೈತ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ
ಲ. ಕಿಶೋರ್ ಶೆಟ್ಟಿ ಬಪ್ಪನಾಡು, ಸಾಮಾಜಿಕ ಕಾರ್ಯಕರ್ತರಾದ ಶರತ್ ಕಾರ್ನಾಡ್, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದ ಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ, ರಘುನಾಥ ಕಾಮತ್, ಕಿಲ್ಪಾಡಿ ಗ್ರಾಪಂ ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಗೌತಮ್ ಜೈನ್ ಮುಲ್ಕಿ ಅರಮನೆ, ಮುಲ್ಕಿ ನ.ಪಂ ಸದಸ್ಯ ಹರ್ಷರಾಜ ಶೆಟ್ಟಿ
ಶಂಕರ್ ಪಡಂಗ , ನ್ಯಾಯವಾದಿ ರವೀಶ್ ಕಾಮತ್ ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ



