ಜನ ಮನದ ನಾಡಿ ಮಿಡಿತ

Advertisement

ಕಡಬ : ಬೈಕ್, ಗೂಡ್ಸ್ ವಾಹನ ಡಿಕ್ಕಿಸವಾರ, ವಿವೇಕಾನಂದ ಕಾಲೇಜು ವಿದ್ಯಾರ್ಥಿ ಮೃತ್ಯು

ಕಡಬ : ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ.


ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ.ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್(೨೦ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶ್ರೀಜಿಸ್‌ರವರು ರಾಮಕುಂಜ ಶಾರದಾನಗರದಲ್ಲಿರುವ ಚಿಕ್ಕಮ, ಅಂಗನವಾಡಿ ಕಾರ್ಯಕರ್ತೆಯೂ ಆಗಿರುವ ಯಮುನಾಕೇಶವ ಗಾಂಧಿಪೇಟೆ ಅವರ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಬೈಕ್‌ಗೆ ಪೆಟ್ರೋಲ್ ತುಂಬಿಸಿ ಮತ್ತೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ವೇಳೆ ಉಪ್ಪಿನಂಗಡಿಯಿಂದ ಕಡಬ ಕಡೆಗೆ ಹೋಗುತ್ತಿದ್ದ ಮಿನಿ ಗೂಡ್ಸ್(ಜೀತ್) ನಡುವೆ ಗೋಳಿತ್ತಡಿ ಸಮೀಪ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಶ್ರೀಜಿಸ್‌ರನ್ನು ತಕ್ಷಣ ಮಂಗಳೂರಿನ ಎ.ಜೆ.ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರು ಎಂದು ವರದಿಯಾಗಿದೆ. ಮೃತ ಶ್ರೀಜಿಸ್‌ರವರು ತಂದೆ ಗುರುವಪ್ಪ, ತಾಯಿ ಗಿರಿಜಾ, ಸಹೋದರರಾದ ಸುನೀಶ್ ಹಾಗೂ ಸುಜಿಸ್‌ರವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!