ಕಡಬ: ಕಡಬ ಸರಕಾರಿ ಕಾಲೇಜಿನ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದ ಬಗ್ಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ನೀಡಿರುವ ಹೇಳಿಕೆಯನ್ನು ಕಡಬ ಬ್ಲಾಕ್ ಕಾಂಗ್ರೆಸ್ ಖಂಡಿಸಿದೆ.

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್
ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಆ್ಯಸಿಡ್ ದಾಳಿ
ವಿಚಾರದಲ್ಲಿ ರಾಜ್ಯ ಸರಕಾರ ತಕ್ಷಣ ಸ್ಪಂದಿಸಿದೆ. ಆದರೂ
ಶಾಸಕರು ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ ಎಂದು
ಆರೋಪಿಸಿದರು. ಆ್ಯಸಿಡ್ ದಾಳಿ ಹಿನ್ನೆಲೆಯಲ್ಲಿ ರಾಜ್ಯ
ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ
ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು
ಹೇಳಿರುವುದು ಅವರ ಹತಾಶ ಮನೋಭಾವ. ಇದು
ಖಂಡನೀಯ” ಎಂದರು.
ಸರಕಾರದ ಪರವಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಸಂತ್ರಸ್ತೆಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಲ್ಲದೆ ಸೂಕ್ತ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ ಎಂದು ಸುಧೀರ್ ಶೆಟ್ಟಿ ಸರಕಾರದ ಕ್ರಮವನ್ನು ಸಮರ್ಥಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಪಿ. ವರ್ಗೀಸ್, ಕಾಂಗ್ರೆಸ್ ಮುಖಂಡರಾದ ಸತೀಶ್ ನ್ಯಾಕ್ ಮೇಲಿನ ಮನೆ, ಅಶ್ರಫ್ ಶೇಡಿಗುಂಡಿ, ಕೆ.ಎಂ.ಹನೀಫ್, ಸತೀಶ್ ಶೆಟ್ಟಿ ಬೀರುಕ್ಕು, ಜಯರಾಮ ಎಡಮಂಗಲ, ಸತೀಶ್ ಮೀನಾಡಿ, ಫೈಝಲ್ ಕಡಬ ಮತ್ತಿತರರು ಉಪಸ್ಥಿತರಿದ್ದರು.



