ಜನ ಮನದ ನಾಡಿ ಮಿಡಿತ

Advertisement

ಸಂತ್ರಸ್ತರಿಗೆ ಪರಿಹಾರ ನೀಡಲು ಬಿಜೆಪಿ ಯುವ ಮೋರ್ಚಾ ಆಗ್ರಹ

ಕಡಬ :ಕಡಬ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ನಡೆದ ವಿದ್ಯಾರ್ಥಿನಿಯರ ಮೇಲಿನ ಆ್ಯಸಿಡ್ ದಾಳಿಯನ್ನು ಖಂಡಿಸಿರುವ ಬಿಜೆಪಿ ಯುವ ಮೋರ್ಚಾ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಲಾ 10 ಲಕ್ಷ ರೂ.ಪರಿಹಾರ ಮತ್ತು ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರಕಾರವೇ ಭರಿಸಬೇಕೆಂದು ಆಗ್ರಹಿಸಿತು.

ಕಡಬ ತಾಲೂಕು ಆಡಳಿತ ಸೌಧಕ್ಕೆ ಮಂಗಳ ವಾರ ಭೇಟಿ ನೀಡಿದ ಬಿಜೆಪಿ ಯುವ ಮೋರ್ಚಾ ಪ್ರಮುಖರ ನಿಯೋಗವು ತಹಸೀಲ್ದಾರ್ ಕಚೇರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು. ಸುಳ್ಯ ಶಾಸಕಿ ಭಾಗೀರಥಿ

ಮುರುಳ್ಯ,ಯುವ ಮೋರ್ಚಾ ಸುಳ್ಯ ಮಂಡಲದ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪೂರ್ವಾಧ್ಯಕ್ಷ ಶ್ರೀಕೃಷ್ಣ ಎಂ.ಆರ್., ಪ್ರಧಾನ ಕಾವ್ಯದರ್ಶಿ ಪ್ರದೀಪ್ ಕಲ್ಲರಮೂಲೆ, ಪ್ರಮುಖ ರಾದ ಹರ್ಷಿತ್ ಪೆರುವಾಜೆ, ಮನುದೇವ್ ಪರಮಲೆ, ದುರ್ಗೇಶ್ ಪಾರೆಪ್ಪಡಿ, ಬಿಜೆಪಿ ಪ್ರಮುಖರು, ಮತ್ತಿತರರು ಉಪಸ್ಥಿತರಿದ್ದರು. ಕಡಬ ಉಪ ತಹಸೀಲ್ದಾರ್ ಕೆ.ಟಿ. ಮನೋಹರ್ ಅವರು ಮನವಿ ಸ್ವೀಕರಿಸಿದರು. ಬಳಿಕ ಕಡಬ ಠಾಣೆಗೆ ತೆರಳಿದ ನಿಯೋಗವು ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು. ಕಡಬ ಎಸ್‌ಐ ಅಭಿನಂದನ್ ಎಂ.ಎಸ್. ಮನವಿ ಸ್ವೀಕರಿಸಿದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!