ಜನ ಮನದ ನಾಡಿ ಮಿಡಿತ

Advertisement

ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿಗೆ ಆಯ್ಕೆ

ದಕ್ಷಿಣ ಕನ್ನಡ : ಸಮಾಜಸೇವಕಿ, ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕಿ, ಸಂಪಾದಕಿ, ಸಾಹಿತಿ, ಸಂಘಟಕಿ ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ ಬೆಂಗಳೂರು ‘ಶ್ರೀ ಸರ್ವೆ ಜನಾಃ ಆರ್ಟ್ಸ್‌ ಮತ್ತು ಕಲ್ಚರಲ್ ಟ್ರಸ್ಟ್ (ರಿ). 7ನೇ ವಾರ್ಷಿಕೋತ್ಸವದ ಪ್ರಯುಕ್ತ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ನೀಡುವ ‘ರಾಣಿ ಕಿತ್ತೂರ ಚೆನ್ನಮ್ಮ ರಾಜ್ಯ ಪ್ರಶಸ್ತಿ’ ಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಯಾಗಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗ ಮಂದಿರದಲ್ಲಿ ಮಾರ್ಚ್ 24 , 2024 ರಂದು ನಡೆಯಲಿದೆ ಎಂದು ಸಂಸ್ಥೆಯ ರಾಜ್ಯಾಧ್ಯಕ್ಷರಾದ ಲಕ್ಷಿತಾ ಗಂಗಾವತಿ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಡಾ.ಮಾಲತಿ ಶೆಟ್ಟಿ ಮಾಣೂರುರವರು 18 ವರುಷದಿಂದ ಸಾಹಿತ್ಯ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ ಹಾಗೂ ಕಳೆದ 11 ವರುಷದಿಂದ ಸಾಹಿತ್ಯ ಪರ ಪತ್ರಿಕೆಯನ್ನು ನಡೆಸುತ್ತಿದ್ದಾರೆ. 9 ಕೃತಿಗಳನ್ನು ಸಾಹಿತ್ಯಲೋಕಕ್ಕೆ ನೀಡಿದ್ದಾರೆ. ಇತರ ಹಿರಿಯ ಕಿರಿಯ ಸಾಹಿತಿಗಳ 38 ಕೃತಿಗಳನ್ನು ಅಮೃತ ಪ್ರಕಾಶ ಪತ್ರಿಕೆ ಸರಿಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರಿನ ಅತ್ತಾವರದಲ್ಲಿ ಪತಿ ಸತ್ಯ ಪ್ರಕಾಶ ಶೆಟ್ಟಿ ಜೊತೆ ವಾಸವಾಗಿದ್ದಾರೆ. ಹಲವಾರು ರಾಜ್ಯ ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದಾರೆ. ಪ್ರಸ್ತುತ ಪತ್ರಿಕೆ ಜೊತೆಗೆ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲೆಯ ಮಾಧ್ಯಮ ಸಂಚಾಲಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ..

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!