ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ:

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.

ಅಲ್ಲದೇ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮುನ್ಸೂಚನೆ ನೀಡಿದ್ದಾರೆ. ಮೀನುಗಾರರು, ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಕಡ್ಡಾಯವಾಗಿ ನಿರ್ವಹಿಸುವುದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಜಿಲ್ಲಾಧಿಕಾರಿ ಕಚೇರಿ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಸೂಚಿಸಲಾಗಿದೆ.

ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077/ 0824 2442590 ದೂರವಾಣಿಯನ್ನು ಸಂಪರ್ಕಿಸುವಂತೆ ದ.ಕ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!