ಜನ ಮನದ ನಾಡಿ ಮಿಡಿತ

Advertisement

ಪ್ರಥಮ ಮತ ಚಲಾಯಿಸಲಿರುವ ನೂತನ ಮತದಾರರಿಗೆ ಮತದಾನದ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ

ಭಾರತ ಚುನಾವಣಾ ಆಯೋಗ, ದಕ್ಷಿಣ ಕನ್ನಡ ಜಿಲ್ಲಾ ಸ್ವೀಪ್‌ಸಮಿತಿ, ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ಮೂಡುಬಿದಿರೆ ಸ್ವೀಪ್ ಸಮಿತಿ ವತಿಯಿಂದ ಮೂಡುಬಿದಿರೆ ತಾಲೂಕಿನ ಮಹಾವೀರ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವ ಹಾಗೂ ಮಾಹಿತಿ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ವೆಂಕಟಚಲಪತಿಯವರು ಮಾತನಾಡಿ, ಯುವ ವಿದ್ಯಾರ್ಥಿಗಳಿಗೆ ಮತದಾನ ತಮ್ಮ‌ಜೀವನದಲ್ಲಿ ಎಷ್ಟು ಮುಖ್ಯ ಹಾಗೂ ಅದು ನಮ್ಮ‌ ಹಕ್ಕು ಎಂದು ತಿಳಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗಳು ಎಪ್ರಿಲ್ 26 ರಂದು ಮತಗಟ್ಟೆ ತೆರಳಿ ತಮ್ಮ ಜವಾಬ್ದಾರಿಯಂತೆ ಮತ ಚಲಾಯಿಸಿ ಎಂದರು.

ಮೂಡುಬಿದಿರೆ TLMT ಶ್ರೀಮತಿ ರಂಜಿತಾ ಶೆಟ್ಟಿ ಇವರು ಮತದಾನದ ಮಹತ್ವ, ರಾಷ್ಟ್ರದ ಭವಿಷ್ಯ ನಿರ್ಧರಿಸುವಲ್ಲಿ ಯುವ ಮತದಾರರ ಪಾತ್ರ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ನಿರ್ಧಾರದ ಬಲದ ಬಗೆಗೆ ಉಪಯುಕ್ತ ಮಾಹಿತಿ ನೀಡಿದರು. ಮುಲ್ಕಿ ಹೋಬಳಿ TLMT ಶ್ರೀಮತಿ ಚಿತ್ರಾಶ್ರೀ ಕೆ.ಎಸ್ ಇವರು ಮತದಾರರಿಗೆ ಚುನಾವಣಾ ಆಯೋಗ ಬಳಕೆಗೆ ತಂದಿರುವ ಉಪಯುಕ್ತ Appಗಳು ಹಾಗೂ ಕ್ಷೇತ್ರದ ಮತದಾನದ ಪ್ರಮಾಣ ಹೆಚ್ಚಿಸುವಲ್ಲಿ ಯುವ ಮತದಾರರ ಪಾತ್ರದ ಬಗೆಗೆ ಸಕಾಲಿಕ ಮಾಹಿತಿ ಒದಗಿಸಿದರು.ಬಳಿಕ ಮತದಾನ ಮಹತ್ವ ತಿಳಿಸಲು ಪ್ರತಿಜ್ಞಾ ವಿಧಿಯನ್ನು‌ಸ್ವೀಕರಿಸಲಾಯಿತು. ಹಾಗೂ ಮತದಾನಕ್ಕೆ ಜಾಗೃತಿ ಗೀತೆಯನ್ನು ವೀಕ್ಷಿಸಲಾಯಿತು.

ಈ ಸಂದರ್ಭದಲ್ಲಿ ಪದವಿ‌ ಕಾಲೇಜು ಪ್ರಾಂಶುಪಾಲರಾದ ಹರೀಶ್(ಪ್ರಭಾರ), ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ರಮೇಶ್‌ಭಟ್ ಉಪಸ್ಥಿತರಿದ್ದರು.

ರಾಜ್ಯಶಾಸ್ತ್ರ ಉಪನ್ಯಾಸಕರಾದ ಪೂರ್ಣಿಮಾ ಅವರು ಕಾರ್ಯಕ್ರಮ ನಿರೂಪಿಸಿದರು. ರಾಜ್ಯಶಾಸ್ತ್ರ ಉಪನ್ಯಾರಾದ ಪ್ರವೀಣ್ ಸ್ವಾಗತಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!