ಜನ ಮನದ ನಾಡಿ ಮಿಡಿತ

Advertisement

ಹೆಬ್ರಿ: ದೊಣ್ಣೆಯಿಂದ ಹೊಡೆದು ಅಣ್ಣನನ್ನು ಕೊಲೆಗೈದ ತಮ್ಮ….!

ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾನೆ.


ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ ಈ ಘಟನೆ ನಡೆದಿದೆ.
ಮೃತರನ್ನು ನಾಲ್ಕೂರು ಗ್ರಾಮದ ಕಜ್ಕೆ ಅರಮನೆಜೆಡ್ಡು ನಿವಾಸಿ ಗುಲಾಬಿ ಎಂಬವರ ಮಗ ಮಂಜುನಾಥ (೩೫) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಮೃತರ ತಮ್ಮ ವಿಶ್ವನಾಥ್ (೩೦) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಮತ್ತು ವಿಶ್ವನಾಥ ಒಂದೇ ಮನೆಯಲ್ಲಿ ವಾಸವಾಗಿದ್ದರು. ಆಗಾಗ ಇವರ ಮಧ್ಯೆ ಗಲಾಟೆ ಆಗುತ್ತಿದ್ದು, ಮಧ್ಯರಾತ್ರಿ ವೇಳೆ ಮಂಜುನಾಥ, ತನ್ನ ತಮ್ಮ ವಿಶ್ವನಾಥನನ್ನು ಉದ್ದೇಶಿಸಿ, ನನ್ನ ಹೆಂಡತಿ ಮನೆ ಬಿಟ್ಟು ಹೋಗಲು ನೀನೇ ಕಾರಣವೆಂದು ಹೇಳಿದನು. ಇದೇ ವಿಚಾರದಲ್ಲಿ ವಿಶ್ವನಾಥ ಕೋಪ ಗೊಂಡು ಛಾವಣಿಯಲ್ಲಿದ್ದ ದೊಣ್ಣೆಯಿಂದ ಮಂಜುನಾಥ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ ಎನ್ನಲಾಗಿದೆ.
ಇದರ ಪರಿಣಾಮ ಮಂಜುನಾಥ್ ಅವರ ತಲೆಯಿಂದ ತೀವ್ರ ರಕ್ತ ಹರಿದು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪರಮೇಶ್ವರ ಹೆಗಡೆ, ಕರ‍್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ, ಕರ‍್ಕಳ ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ ಟಿ.ಎಂ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!