ಜನ ಮನದ ನಾಡಿ ಮಿಡಿತ

Advertisement

ತ್ರಾಸಿ: ಲಾರಿ- ಬೈಕ್ ಮಧ್ಯೆ ಭೀಕರ ಅಪಘಾತ; ಸವಾರ ಮೃತ್ಯು, ಮತ್ತೋರ್ವ ಗಂಭೀರ

ಉಡುಪಿ: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.


ಇಂದು ಮಧ್ಯಾಹ್ನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಭೀಕರ ಘಟನೆ ನಡೆದಿದೆ. ಮೃತ ಸವಾರನನ್ನು ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಎಂದು ಗುರುತಿಸಲಾಗಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ‌. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿತು. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!