ಜನ ಮನದ ನಾಡಿ ಮಿಡಿತ

Advertisement

ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಬಿ.ರಮಾನಾಥ ರೈ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಏ.3ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.


ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬೆಳಗ್ಗೆ 9.30ಕ್ಕೆ ಕುದ್ರೋಳಿ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಕಾಂಗ್ರೆಸ್ ಕಾರ್ಯಕರ್ತರು ಈ ಸಂದರ್ಭ ಭಾಗವಹಿಸುವರು ಎಂದು ತಿಳಿಸಿದರು
ಕಾಂಗ್ರೆಸ್ ಬಡ, ಹಿಂದುಳಿದ ವರ್ಗದವರ ಪಕ್ಷವಾಗಿದ್ದು, ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿದೆ. ಕಾಂಗ್ರೆಸ್ ಸಂಸದರ ಕಾಲದಿಂದ ಜಿಲ್ಲೆಯ ಅಭಿವೃದ್ಧಿಯ ಚಿತ್ರಣ ಬದಲಾಗಿದ್ದು, ಮೂರು ದಶಕಗಳಿಂದ ಬಿಜೆಪಿ ಸಂಸದರು ಗೆಲ್ಲುವ ಮೂಲಕ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಟೀಕಿಸಿದರು.
ಈ ಸಂದರ್ಭ ಮುಡಾ ಮಾಜಿ ಅಧ್ಯಕ್ಷ ಇಬ್ರಾಹಿಂ ಕೊಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ನವೀನ್ ಡಿಸೋಜ, ಮಾಜಿ ಮೇಯರ್ ಮಹಾಬಲ ಮಾರ್ಲ, ಪದ್ಮನಾಭ ಕೋಟ್ಯಾನ್, ಟಿ.ಕೆ.ಸುಧೀರ್, ಜಯಶೀಲ ಅಡ್ಯಂತಾಯ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!