ಜನ ಮನದ ನಾಡಿ ಮಿಡಿತ

Advertisement

ದಲಿತ ವಿರೋಧಿ ಕಾಂಗ್ರೆಸ್ಸನ್ನು ಸೋಲಿಸಿ: ದಿನಕರ ಬಾಬು ಕರೆ

ಉಡುಪಿ: ಕಾಂಗ್ರೆಸ್ ಸರಕಾರವು ದಲಿತರ ಸಮಾಧಿ ಮೇಲೆ ಕುಳಿತು ಅಧಿಕಾರ ನಡೆಸುತ್ತಿದೆ.

ಕಾಂಗ್ರೆಸ್ ಪಕ್ಷವು ಮತಬ್ಯಾಂಕಿಗಾಗಿ ಮಾತ್ರ ದಲಿತರನ್ನು ಓಲೈಸುತ್ತದೆ. ಕಾಂಗ್ರೆಸ್ಸಿಗರು ದಲಿತರಿಗೆ ವಿವರಿಸಲಾಗದಷ್ಟು ಅನ್ಯಾಯವನ್ನು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸೋಲಿಸಲು ದಲಿತ ಸಮಾಜ ಸನ್ನದ್ಧರಾಗಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಕರೆ ನೀಡಿದರು.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ದಲಿತರನ್ನು ತುಳಿದು, ಅವರ ಬೆನ್ನಿಗೆ ಚೂರಿ ಹಾಕಿ ಅವರನ್ನು ಬಳಸಿಕೊಂಡು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಗೆ ನೂರು ವರ್ಷದ ಇತಿಹಾಸ ಇದೆ. ಎರಡು ಬಾರಿ ಅಂಬೇಡ್ಕರ್ ಅವರನ್ನು ಸೋಲಿಸಿರುವುದು ಮತ್ತು ಅವರನ್ನು ಸೋಲಿಸಿದವರಿಗೆ ಪದ್ಮ ಪ್ರಶಸ್ತಿ ನೀಡಿರುವುದು ಕಾಂಗ್ರೆಸ್ ನ ದಲಿತ ವಿರೋಧಿ ಕರಾಳ ಇತಿಹಾಸ. ಕೇವಲ ವೋಟ್ ಬ್ಯಾಂಕ್ ಗಾಗಿ ಮಾತ್ರ ದಲಿತರನ್ನು ದುರ್ಬಳಕೆ ಮಾಡಿಕೊಂಡು ಬಂದಿರುವ ಕಾಂಗ್ರೆಸ್ಸಿಗೆ ಮುoದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ದಿನಕರ ಬಾಬು ಕರೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಮಾದ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ., ಎಸ್.ಸಿ. ಮೋರ್ಚಾ ಜಿಲ್ಲಾ ಮುಖಂಡರಾದ ಮಾಧವ ಸಾಲಿಗ್ರಾಮ, ಹಿರಿಯಣ್ಣ ಉಪ್ಪೂರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!