ಇಳಕಲ್ ತಾಲೂಕಿನ ವ್ಯಾಪ್ತಿಯಡಿ ಬರುವಂತ ನಂದವಾಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ 2024 ರ ಪ್ರಯುಕ್ತ ಮತದಾರರಿಗೆ ಮತದಾನದ ಜಾಗೃತಿ ಕಾರ್ಯಕ್ರಮದ ಸಾನಿಧ್ಯ ವಹಿಸಿದ ಪರಮ ಪೂಜ್ಯ ಶ್ರೀ ಡಾ// ಅಭಿನವ ಚನ್ನಬಸವ ಶಿವಾಚಾರ್ಯರು ಮಹಾಂತೇಶ್ವರ ಮಠ ನಂದವಾಡಗಿ ಪೂಜ್ಯರು ಹಾಗೂ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಸಿಗೆ ನೀರು ಹಾಕುವದರ ಮೂಲಕ ಉದ್ಗಾಟಿಸಿದರು ಮತದಾನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು .

ಹಾಗೂ ಕಿರು ನಾಟಕ ಹಾಗೂ ಕ್ಯಾಂಡಲ್ ಮೂಲಕ ಸಂಘದ ಸದಸ್ಯರಿಗೆ ಮಾಹಿತಿ ಹೇಳಲಾಯಿತು ರಂಗೋಲಿ ಸ್ಪರ್ಧೆಯಲ್ಲಿ ಮತದಾನ ಜಾಗೃತಿ ಮೂಡಿಸುವ ರಂಗೋಲಿಗಳ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ನೀಡಲಾಯಿತು.
ಬಳಿಕ ಸ್ವ ಸಹಾಯ ಸಂಘದ ಸದಸ್ಯರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದರು. ಬಳಿಕ ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಐಇಸಿ ಸಂಯೋಜಕರು, ತಾಲೂಕ ಕಾರ್ಯಕ್ರಮ ವ್ಯವಸ್ಥಾಪಕರು, SDA, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಹಾಗೂ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವಂತ ಸ್ವ ಸ ಹಾಯ ಸಂಘದ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ ಮಹಾಂತೇಶ್ ಕುರಿ



