ಜನ ಮನದ ನಾಡಿ ಮಿಡಿತ

Advertisement

ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಪಕ್ಷದ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

ಬಂಟ್ಸ್ ಹಾಸ್ಟೆಲ್ ಸರ್ಕಲ್ ನಲ್ಲಿರುವ ಬಿಜೆಪಿ ಚುನಾವಣಾ ಕಾರ್ಯಾಲಯದಿಂದ ಚೆಂಡೆ, ಬ್ಯಾಂಡ್ ವಾದ್ಯದೊಂದಿಗೆ‌ ಹೊರಟ ಮೆರವಣಿಗೆಯು ಅಂಬೇಡ್ಕರ್ ವೃತ್ತ, ಹಂಪನಕಟ್ಟೆ ಮಾರ್ಗವಾಗಿ ಪುರಭವನದ ಬಳಿ ಸಮಾಪ್ತಿಗೊಂಡಿತು. ಮೆರವಣಿಗೆ ಹೊರಡುವ ಪೂರ್ವದಲ್ಲಿ ವಂದೇ ಮಾತರಂ ಗೀತೆ ಹಾಡಲಾಯಿತು.ಭಾರತ ಮಾತೆಯ ಚಿತ್ರ ಇರುವ ವಾಹನದ ಜೊತೆಗೆ ಕಾರ್ಯಕರ್ತರು ಹೆಜ್ಜೆ ಹಾಕಿದರು.ಬಂಟ್ಸ್ ಹಾಸ್ಟೆಲ್ ಪಕ್ಕದ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಕಚೇರಿಯಿಂದ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕಿ ಭಾಗೀರಥಿ ಮುರುಳ್ಯ ,ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೇ ಮಾಧವ ಗೌಡ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!