ಇಳಕಲ್ : ತಾಲೂಕಿನ ಗೊರಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ ಮೂಡಿಸುವ
ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು ಮತದಾನ ಜಾಗೃತಿ ಮೂಡಿಸುವ ರಂಗೋಲಿಗಳ ಹಾಕಿದ ಸ್ಫರ್ಧಿಗಳಿಗೆ ಪ್ರಥಮ ಸ್ಥಾನ, ದ್ವಿತೀಯ ಹಾಗೂ ತೃತೀಯ ಸ್ಥಾನ ಆಯ್ಕೆ ಮಾಡಿ ಪ್ರಶಸ್ತಿ ಪತ್ರ ನೀಡಲಾಯಿತು.
ಸಹಾಯಕ ನಿರ್ದೇಶಕರು ಪ್ರತಿಜ್ಞಾ ವಿಧಿ ಭೋಧಿಸುವ ಮೂಲಕ ಸ್ವ ಸಹಾಯ ಸಂಘದ ಸದಸ್ಯರಿಗೆ ಮತದಾನ ಅರಿವು ಮೂಡಿಸಿ, ಕಡ್ಡಾಯವಾಗಿ ವಲಸೆ ಯಾಕ್ರಿ, ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನ ಮೂಲಕ ಕೂಲಿ ಕೆಲಸದಲ್ಲಿ ಆಸಕ್ತಿ ಇರುವ ಮಹಿಳೆಯರಿಗೆ ಫಾರ್ಮ್ ನಂ 6 ನೀಡಿ, ಉದ್ಯೋಗ ಹಾಜರಾಗುವಂತೆ ಇಳಕಲ್ ತಾಲೂಕಿನ ಸಹಾಯಕ ನಿರ್ದೇಶಕ ಜಿ .ಎಸ್. ಶಿರಗುಪ್ಪಿ ತಿಳಿಸಿದರು.
ಈ ಸಂದರ್ಭದಲ್ಲಿ ಗೊರೆಬಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ .ಎ. ದಕಣಿ, ತಾಂತ್ರಿಕ ಸಂಯೋಜಕ ವಿಶ್ವನಾಥ, ಎನ್. ಆರ್. ಎಲ್. ಎಂ. ಸಂಯೋಜಕ ಕೃಷ್ಣ ಪವಾರ, ಐ.ಇ.ಸಿ. ಸಂಯೋಜಕಿ ಎಲ್ಲಮ್ಮ ಬಂಡ್ರಿ, ತಾ.ಪಂ. ಕಾರ್ಯದರ್ಶಿ ದೇವಣ್ಣ ಕಳ್ಳಿ, ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಡಿ ಬರುವ ಸ್ವಸಹಾಯ ಸಂಘಗಳ ಸದಸ್ಯರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.



