ಜನ ಮನದ ನಾಡಿ ಮಿಡಿತ

Advertisement

ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ;ಸಹಸವಾರ ಸ್ಥಳದಲ್ಲಿಯೇ ಸಾವು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.


ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ.


ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.


ಘಟನೆಯಿಂದ ರಿಕ್ಷಾ ಚಾಲಕ ಸಜೀಪ ನಿವಾಸಿಗಳು ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.‌‌‌ ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ‌ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!