ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಇಳಿದಿದ್ದು, ಯಾರಿಗೂ ಗಾಯಗಳಾಗಿಲ್ಲ. ಆದರೆ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಘಟನೆ ಸುಮಾರು ಒಂದು ತಾಸುಗಳ ಕಾಲ ಬಂಟ್ವಾಳ- ಮೂಡುಬಿದಿರೆ ರಸ್ತೆ ಬ್ಲಾಕ್ ಆಗಿತ್ತು ಎನ್ನಲಾಗಿದೆ.



