ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಜಕ್ರಿಬೆಟ್ಟು ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಎಂಬಾತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭೇಟಿಯಾಗಿ ಆರೋಗ್ಯ ವಿಚಾರಿಸಿ, ,ಮುಂದಿನ ಚಿಕಿತ್ಸೆಯ ಬಗ್ಗೆ ವೈದ್ಯರುಗಳೊಂದಿಗೆ ಮಾಹಿತಿ ಪಡೆದಿದ್ದಾರೆ.



