ಜನ ಮನದ ನಾಡಿ ಮಿಡಿತ

Advertisement

ಕನ್ನಡ ಚಿತ್ರರಂಗ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಟ ನಟ ಹಾಗೂ ನಿರ್ಮಾಪಕ ದ್ವಾರಕೀಶ್ (81) ಅವರು ಮಂಗಳವಾರ ವಿಧಿವಶರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಹೃದಯಾಘಾತದಿಂದ ಇಂದು ಇಹಲೋಕ ತ್ಯಜಿಸಿದ್ದಾರೆಂದು ಮೂಲಗಳು ತಿಳಿಸಿವೆ.
ನಟ ದ್ವಾರಕೀಶ್‌ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗಣನೀಯ ಸೇವೆ ಸಲ್ಲಿಸಿದ ಅವರನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್‌ ನೀಡಿದೆ.

ನಟರಾಗಿ, ನಿರ್ದೇಶಕ, ನಿರ್ಮಾಪಕರಾಗಿ ಹಲವಾರು ಚಿತ್ರಗಳ ಕೊಡುಗೆ ನೀಡಿರುವ ಅವರು ಕನ್ನಡ ಚಿತ್ರರಂಗಕ್ಕೆ ಕಲಾಸೇವೆ ಸಲ್ಲಿಸಿದ್ದಾರೆ. ಡಾ. ವಿಷ್ಣುವರ್ಧನ್‌, ಡಾ. ರಾಜ್‌ಕುಮಾರ್‌ ಹಾಗೂ ಅಂಬರೀಶ್‌ರಂತಹ ಮೇರು ನಟರೊಂದಿಗೆ ಹಿರಿಯ ತೆರೆಯಲ್ಲಿ ಮಿಂಚಿರುವ ನಟ ದ್ವಾರಕೀಶ್‌ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಬರೋಬ್ಬರಿ 40ಕ್ಕೂ ಹೆಚ್ಚು ಸಿನಿಮಾಗಳ ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಅವರು ಕನ್ನಡ ಜನತೆಗೆ ಜನಪ್ರಿಯ ರಾಜಕುಳ್ಳ ಎಂದೇ ಪ್ರಿಯರಾಗಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!