ಜನ ಮನದ ನಾಡಿ ಮಿಡಿತ

Advertisement

“ದ.ಕ. ಜಿಲ್ಲೆಯಲ್ಲಿ ಅಭಿವೃದ್ಧಿ ನಡೆದೇ ಇಲ್ಲ!”-ಮಮತಾ ಗಟ್ಟಿ

ಮಂಗಳೂರು: “ದಕ್ಷಿಣ ಕನ್ನಡ ಜಿಲ್ಲೆಗೆ ಈ ಬಾರಿ ನಾರಾಯಣ ಗುರುಗಳ ತತ್ವ ಆದರ್ಶವನ್ನು ಸಂಪೂರ್ಣವಾಗಿ ಪರಿಪಾಲಿಸಿಕೊಂಡು ಬಂದಿರುವ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ. ಜಿಲ್ಲೆಯಲ್ಲಿದ್ದ ಬಿಜೆಪಿ ಸಂಸದರು ಜನರನ್ನು ಎತ್ತಿಕಟ್ಟುವ ಮೂಲಕ ಅಭಿವೃದ್ಧಿಯನ್ನು ಮಾಡದೇ ಜಾತಿ ಧರ್ಮಗಳ ಆಧಾರದಲ್ಲಿ ವಿಂಗಡಣೆ ಮಾಡಿ ಆಡಳಿತ ನಡೆಸಿದ್ದಾರೆ” ಎಂದು ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.


“ನರೇಂದ್ರ ಮೋದಿಯವರು ಯಾವೊಂದು ರೀತಿಯಲ್ಲಿಯೂ ಅಭಿವೃದ್ಧಿಯನ್ನು ಮಾಡದೇ ಕೇವಲ ದಿನನಿತ್ಯ ಅಗತ್ಯವಸ್ತುಗಳ ಮೇಲೆ ಜಿಎಸ್ಟಿ ಹಾಕಿದರು. ಕಪ್ಪು ಹಣ ವಾಪಾಸ್ ತರುವುದಾಗಿ ಹೇಳಿ ಬಡವರಿಂದ ಬ್ಯಾಂಕ್ ಗಳಲ್ಲಿ ಅಕೌಂಟ್ ಮಾಡಿಸಿ 35,000 ಲಕ್ಷ ಕೋಟಿ ಹಣವನ್ನು ಲೂಟಿ ಮಾಡಿದರು. ಕೊರೋನಾ ಸಂದರ್ಭದಲ್ಲಿಯೂ ಪಿಎಂ ಕೇರ್ ಫಂಡ್ ಗೆ ಸಾವಿರಾರು ಕೋಟಿ ಹಣ ಸಂಗ್ರಹ ಮಾಡಿದರು. ಆದರೆ ಲೆಕ್ಕ ಕೊಡಲಿಲ್ಲ. ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿ ಯುವಜನರನ್ನು ಮೋಸ ಮಾಡಿದರು” ಎಂದು ಆರೋಪಿಸಿದರು.
“ಜನರನ್ನು ಲೂಟಿ ಮಾಡುವುದನ್ನೇ ಕಾಯಕ ಮಾಡಿಕೊಂಡಿರುವ ಪ್ರಧಾನಿ ಅವರು ಜನರನ್ನು ವ್ಯವಸ್ಥಿತವಾಗಿ ವಂಚನೆ ಮಾಡುತ್ತಿದ್ದಾರೆ. ವಿಶ್ವಗುರು ಎಂದು ಕರೆಸಿಕೊಂಡವರು ಮಾಡಿದ್ದೇನು? ಜನರನ್ನು ಜಾತಿ ಧರ್ಮಗಳ ಆಧಾರದಲ್ಲಿ ವಿಂಗಡಿಸದೆ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷ ಇದ್ದರೆ ಕಾಂಗ್ರೆಸ್ ಮಾತ್ರ”.

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಶೇ.90ರಷ್ಟು ಬಳಸಲ್ಪಡುತ್ತಿವೆ. ದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆ ಮೂಲಕ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂ. ನೆರವು, ಉದ್ಯೋಗದಲ್ಲಿ ಶೇ.50ರಷ್ಟು ಮೀಸಲಾತಿ ಸಹಿತ ಮಹಿಳೆಯರಿಗಾಗಿ ಹೊಸ ಯೋಜನೆಗಳನ್ನು ಈಗಾಗಲೇ ಘೋಷಣೆ ಮಾಡಿದ್ದಾರೆ. ಇದೆಲ್ಲವೂ ಜಾರಿಯಾಗಬೇಕಾದರೆ ಜನರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು” ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸವಿತಾ ಮಿಸ್ಕಿತ್, ಚಂದ್ರಕಲಾ ರಾವ್, ಗೀತಾ, ಮಂಜುಳಾ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!