ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿ ನದಿಗೆ ಈಜಲು ಹೋದ ಬಾಲಕ ನೀರುಪಾಲು

ಬಂಟ್ವಾಳ : ನೇತ್ರಾವತಿ ನದಿಗೆ ಈಜಲು ಹೋದ ಬಾಲಕನೋರ್ವ ನೀರುಪಾಲಾದ ಘಟನೆ ಕಡೇಶ್ವಾಲ್ಯ ಸಮೀಪದ ನೆಚ್ಚಬೆಟ್ಟು ಎಂಬಲ್ಲಿ ಶನಿವಾರ ಸಂಜೆ ವೇಳೆಗೆ ಸಂಭವಿಸಿದೆ.

ಸ್ಥಳೀಯ ನಿವಾಸಿ ಸಹೀರ್ ಎಂಬವರ ಪುತ್ರ ಸುಹೈಲ್ (13) ನೀರುಪಾಲಾದ ಬಾಲಕ. ಕೆಮ್ಮನ್ ಪಳಿಕೆ ಶಾಲೆಯಲ್ಲಿ ಕಲಿಯುತ್ತಿದ್ದ ಈತ 7 ನೇ ತರಗತಿ ತೇರ್ಗಡೆ ಹೊಂದಿದ್ದ.

ನೆಚ್ಚಬೆಟ್ಟು ತನ್ನ ಮನೆ ಸಮೀಪದ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಂದ ಸ್ನೇಹಿತರ ಜೊತೆಗೆ ಪಕ್ಕದ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದು ಆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ.

 ನದಿ ದಡದಿಂದ ಬೊಬ್ಬೆ ಕೇಳಿ ಬಂದ ಹಿನ್ನಲೆಯಲ್ಲಿ ಹತ್ತಿರದಲ್ಲೇ ಕ್ರಿಕೆಟ್ ಆಟವಾಡುತ್ತಿದ್ದ ಯುವಕರು

ಸುಹೈಲ್ ನನ್ನು ನದಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಆತ ಮೃತಪಟ್ಟಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!