ಜನ ಮನದ ನಾಡಿ ಮಿಡಿತ

Advertisement

ಮಹಾವೀರನ ಚಿಂತನೆಗಳು ಜೈನ ಧರ್ಮಕ್ಕೆ ಸೀಮಿತವಲ್ಲ, ವಿಶ್ವಕ್ಕೆ ಅನ್ವಯಿಸುವಂತದ್ದು: -ಜಿಲ್ಲಾಧಿಕಾರಿ

ಮಂಗಳೂರು:- ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು.

ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಭಾಗಿತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ನಂತರ ವೇಣೂರಿನ ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಲಭಿಸಿತು ಎಂದು ಅವರು ಸಂತಸ ವ್ಯಕ್ತಪಡಿಸಿದರು.

ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್ ಅವರು ಮಾತನಾಡಿ, ಶಾಂತಿ‌ ಸ್ಥಾಪನೆಯಲ್ಲಿ ಜೈನ ಧರ್ಮದ ಪಾತ್ರ ಅತ್ಯಂತ ಪ್ರಮುಖವಾದದ್ದು, ಹಲವು ತತ್ವಗಳನ್ನು ನೀಡಿರುವ ಜೈನ ಧರ್ಮದ ಸಾರವನ್ನು ಅವರು ಈ ಸಂದರ್ಭದಲ್ಲಿ ತಿಳಿಸಿಕೊಟ್ಟರು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ್ ಕೆ., ಪ್ರೊಬೇಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಜೈನ ಸಮಾಜದ ಮುಖಂಡರು, ಪದಾಧಿಕಾರಿಗಳು, ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೆ ನೆರವೇರಿಸಿ, ಗೌರವ ಸಮರ್ಪಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಕೌಶಲ್ಯಾಭಿವೃದ್ಧಿ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರದೀಪ್ ಡಿಸೋಜಾ, ಜೈನ ಸಮಾಜದ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್. ಜಿ ಸ್ವಾಗತಿಸಿದರು.

ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಭಗವಾನ್ ಮಹಾವೀರರ ಜಯಂತಿಯನ್ನು ಆಚರಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!