ಜನ ಮನದ ನಾಡಿ ಮಿಡಿತ

Advertisement

ಕೇರಳದಲ್ಲಿ ಚಿತ್ರ ನಿರ್ಮಾಪಕನ ಮನೆಯಿಂದ ಕಳವುಗೈದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ;ಆರೋಪಿಯನ್ನು ಬಂಧಿಸಿದ ಕೋಟ ಪೊಲೀಸರು

ಉಡುಪಿ: ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಬಿಹಾರ ರಾಜ್ಯದ ಸೀತಾಮರಿ ಜಿಲ್ಲೆಯ ನಿವಾಸಿ ಮುಹಮ್ಮದ್ ಇರ್ಫಾನ್ (35) ಬಂಧಿತ ಆರೋಪಿ. ಈತ ಎ.20ರಂದು ಕೇರಳದ ಚಿತ್ರ ನಿರ್ಮಾಪಕ ಜೋಶಿಯವರ ಕೊಚ್ಚಿ ಪನಂಪಲ್ಲಿಯ ಮನೆಯಲ್ಲಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದನು. ಖಚಿತ ಮಾಹಿತಿಯನ್ನು ಆಧರಿಸಿ ಕೋಟ ಪೊಲೀಸರು ಮೂರ್ಕೈ ಸಮೀಪ ಶನಿವಾರ ಸಂಜೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳವು ನಡೆದ ಸಂದರ್ಭ ಚಲನಚಿತ್ರ ನಿರ್ಮಾಪಕ ಜೋಶಿಯವರ ಮನೆಯಲ್ಲಿ ಯಾರೂ ಇಲ್ಲದಿದ್ದ ಕಾರಣ ಕಳ್ಳತನ ಆಗಿರುವ ಕುರಿತು ಅವರಿಗೆ ಮಾಹಿತಿ ಇರಲಿಲ್ಲ. ಹಾಗಾಗಿ ಪೊಲೀಸರಿಗೂ ದೂರು ಬಂದಿರಲಿಲ್ಲ. ಆದರೆ ಶಂಕಿತ ವಾಹನವೊಂದು ರಾಜ್ಯದಲ್ಲಿ ಸಂಚರಿಸಿದ್ದಲ್ಲದೆ ಕರ್ನಾಟಕದತ್ತ ಸಾಗಿದೆ ಎಂಬ ಮಾಹಿತಿ ಅರಿತ ಕೇರಳ ಪೊಲೀಸರು ಆ ಬಗ್ಗೆ ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ ಕೋಟ ಠಾಣೆಯ ಎಸ್ಸೈ ತೇಜಸ್ವಿ, ಅಪರಾಧ ವಿಭಾಗದ ಎಸ್ಸೈ ಸುಧಾ ಪ್ರಭು ಮತ್ತು ಸಿಬ್ಬಂದಿ ಗೋಪಾಲ ಪೂಜಾರಿ, ಪ್ರಸನ್ನ, ವಿಜಯೇಂದ್ರ ಮೊದಲಾದವರು ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಶಂಕಿತ ಕಾರನ್ನು ತಡೆಯಲು ಯತ್ನಿಸಿದರು.
ಆದರೆ ಚಾಲಕನು ಕಾರನ್ನು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ. ಹಿಂಬಾಲಿಸಿದ ಪೊಲೀಸರು ಕೋಟ ಮೂರುಕೈ ಸಮೀಪದಲ್ಲಿ ತಮ್ಮ ವಾಹನವನ್ನು ಅಡ್ಡ ನಿಲ್ಲಿಸಿ ಕಾರನ್ನು ತಡೆದು ವಶಕ್ಕೆ ಪರಿಶೀಲಿಸಿದಾಗ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ. ವಿಚಾರಿಸಿದಾಗ ಆರೋಪಿಯು ಕೇರಳದಲ್ಲಿ ಕಳವು ಕೃತ್ಯ ಎಸಗಿ ಬಿಹಾರಕ್ಕೆ ಪರಾರಿಯಾಗುತ್ತಿರುವುದಾಗಿ ತಿಳಿಸಿದ್ದಾನೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!