ಜನ ಮನದ ನಾಡಿ ಮಿಡಿತ

Advertisement

ಈ ಬಾರಿ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ `ಕೈ’ ಹಿಡಿತ್ತಾರೆ ಜನರು; ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಬಿಜೆಪಿಯವರಿಂದ ಜನರಿಗೆ ಮೋಸ ಆಗಿದ್ದು , ಈ ಬಾರಿ ಸಮಗ್ರ ಅಭಿವೃದ್ಧಿಗಾಗಿ ಜನತೆ ಮತ್ತೆ ಕಾಂಗ್ರೇಸ್ ಪಕ್ಷದ ಕೈ ಹಿಡಿಯುತ್ತಾರೆ ಎಂದು ‌ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.


ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಪಕ್ಷದ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಲೋಕಸಭಾ ಅಭ್ಯರ್ಥಿಯಾಗಲು ಅರ್ಹ ವ್ಯಕ್ತಿಯಾಗಿದ್ದು, ಜನರಲ್ಲಿ ಅವರ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ. ಸಮಾಜ ಮುಖಿ ಕಾರ್ಯಕ್ರಮಗಳ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಈ ಬಾರಿ ಪ್ರತಿಯೊಬ್ಬ ವ್ಯಕ್ತಿಯೂ ಪದ್ಮರಾಜ್ ಆರ್ ಪೂಜಾರಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೇಸ್ ನ ಸಂಸದರುಗಳಿಂದ ದ.ಕ.ಜಿಲ್ಲೆಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಬಿಜೆಪಿ ಸಂಸದರುಗಳಿಂದ ಹೇಳಿಕೊಳ್ಳುವಂತಹ ಯಾವದೇ ದೊಡ್ಡ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ ರಸ್ತೆಗಳು ಬಹುತೇಕ ಕಾಂಗ್ರೆಸ್ ನ ಅವಧಿಯಲ್ಲಿ ನಡೆದಿವೆ.
ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿ ಯೋಜನೆಗಳ ಸವಲತ್ತುಗಳನ್ನು ಜನರಿಗೆ ನೀಡಿದೆ ಎಂದು ಅವರು ಇದೀಗ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಕೇಂದ್ರದ ಗ್ಯಾರಂಟಿ ಜಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನಸಭಾ ಚುನಾವಣೆಯಲ್ಲಿ ಕಳೆದುಕೊಂಡ ಮತವನ್ನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮರಳಿಪಡೆಯುತ್ತೇವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಮೆಲ್ಕಾರ್ ನಿಂದ ಸಜೀಪ ಸುಭಾಷ್ ನಗರದ ವರೆಗೆ ಬೈಕ್ ರ್ಯಾಲಿ ನಡೆದು ಬಳಿಕ ಚುನಾವಣಾ ಬಹಿರಂಗ. ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ಬಂಟ್ವಾಳ ‌ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಚ ಸುದೀಪ್ ಶೆಟ್ಟಿ, ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಶಬೀರ್, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!