ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..! ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ
Advertisement

ಬೇಸಿಗೆಯ ಝಳ ಲೆಕ್ಕಿಸದೆ ಅತ್ಯಧಿಕ ಪ್ರಮಾಣದ ಮತದಾನ ಮಾಡಿ: ಅಣ್ಣಾಮಲೈ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿಯಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆ ಬಿಡುಗಡೆಯಾಗಿದೆ. 2019ರಲ್ಲಿ ಬಿಜೆಪಿ ಕೇಂದ್ರ ಪಕ್ಷದ ಪ್ರಣಾಳಿಕೆಯಲ್ಲಿ 295 ಅಂಶಗಳಿದ್ದವು. ಅವುಗಳನ್ನು ಸರಕಾರ ಪೂರ್ಣವಾಗಿ ಜಾರಿಗೊಳಿಸಿದೆ. ಈಗ 2024ರ ಪ್ರಣಾಳಿಕೆಯನ್ನೂ ಪ್ರಧಾನಿ ಮೋದಿಯವರು ಪ್ರಕಟಿಸಿದ್ದಾರೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಹೇಳಿದರು.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರ ‘ನವಯುಗ- ನವಪಥ’ ಕಾರ್ಯಸೂಚಿಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕೇಂದ್ರ ಬಿಜೆಪಿಯ ಪ್ರಣಾಳಿಕೆಗೆ ಅನುಗುಣವಾಗಿ ಪಕ್ಷದ ಎಲ್ಲ ಅಭ್ಯರ್ಥಿಗಳೂ ಕೂಡ ತಮ್ಮದೇ ಪ್ರಣಾಳಿಕೆಗಳನ್ನು ಮತದಾರರ ಮುಂದಿಡಬೇಕು ಎಂಬುದು ಪಕ್ಷದ ನೀತಿ ಹಾಗೂ ನಿರ್ದೇಶನವಾಗಿದೆ. ಅದರಂತೆ ಕ್ಯಾಪ್ಟನ್ ಚೌಟರು ತಮ್ಮ ಕಾರ್ಯಸೂಚಿಯನ್ನು ಇಂದು ಕ್ಷೇತ್ರದ ಮತದಾರರ ಮುಂದಿಟ್ಟಿದ್ದಾರೆ ಎಂದು ಅವರು ನುಡಿದರು.

ನಮ್ಮ ಹಿರಿಯ ನಾಯಕರು ಹಾಗೂ ಅತ್ಯುತ್ತಮ ಕಾರ್ಯ ನಿರ್ವಹಣೆಯ ಸಂಸದರಲ್ಲಿ ಒಬ್ಬರಾಗಿ ಹೆಸರಾದ ನಳಿನ್ ಕುಮಾರ್ ಕಟೀಲ್ ಅವರು 1 ಲಕ್ಷದ 17 ಸಾವಿರ ಕೋಟಿಗೂ ಹೆಚ್ಚಿನ ಅನುದಾನವನ್ನು ಕಳೆದ ಹತ್ತು ವರ್ಷಗಳಲ್ಲಿ ತಂದಿದ್ದಾರೆ. ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಹೊಣೆಯನ್ನು ಕ್ಯಾ. ಚೌಟ ಅವರು ತೆಗೆದುಕೊಂಡಿದ್ದಾರೆ.

26ಕ್ಕೆ ಮತದಾನ ನಡೆಯಲಿದೆ. ಬಿಜೆಪಿಯ ಎಲ್ಲ ಕಾರ್ಯಕರ್ತರು, ಶಾಸಕರು, ಪಂಚಾಯತ್ ಸೇರಿದಂತೆ ಎಲ್ಲ ಹಂತದ ಕಾರ್ಯಕರ್ತ ಪದಾಧಿಕಾರಿಗಳು ಚುನಾವಣೆಗಾಗಿ ಬಹಳಷ್ಟು ಕೆಲಸ ಮಾಡಿದ್ದಾರೆ. 400ಕ್ಕೂ ಅಧಿಕ ಸ್ಥಾಣಗಳೊಂದಿ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು. ಈ ಗುರಿ ಸಾಧಿಸಲು ನಾವೆಲ್ಲ ಜತೆಗೂಡಿ ಕೆಲಸ ಮಾಡುತ್ತೇವೆ. ಕ್ಯಾ. ಚೌಟರು ಅತಿದೊಡ್ಡ ಅಂತರದಿಂದ ಗೆಲುವು ಸಾಧಿಸಲು ಶ್ರಮಿಸುತ್ತೇವೆ ಎಂದು ಅಣ್ಣಾಮಲೈ ನುಡಿದರು.

ಇಂದು ಬೆಳಗಿನಿಂದ ಜಿಲ್ಲೆಯ ಹಲವು ಕಡೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದೇನೆ. ಹೋದ ಕಡೆಗಳಲ್ಲೆಲ್ಲ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗಿದೆ. ದೇಶದ ಇತರ ಭಾಗಗಳಲ್ಲಿ ಏ.19ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಸಿಗಾಳಿ ಬಹಳಷ್ಟು ಪರಿಣಾಮ ಬೀರಿದೆ. ಇದೀಗ ಈ ಜಿಲ್ಲೆಯಲ್ಲೂ ಬಿಸಿಗಾಳಿಯ ಪರಿಣಾಮವಿದೆ. ಆದರೆ ಜನತೆ ಅವೆಲ್ಲವನ್ನೂ ಲೆಕ್ಕಿಸದೆ ಬೆಳಗ್ಗೆ ಬೇಗನೆ ಬಂದು ಮತದಾನ ಮಾಡುತ್ತಾರೆ ಎಂದು ವಿಶ್ವಾಸವಿದೆ. ಉತ್ತಮ ಸುಶಿಕ್ಷಿತ ಮತದಾರರು ಇರುವ ಜಿಲ್ಲೆ ಇದಾಗಿದ್ದು, ಹಿಂದಿನ ಬಾರಿಗಿಂತ ಹೆಚ್ಚಿನ ಪ್ರಮಾಣದ ಮತದಾನ ಈ ಬಾರಿ ಆಗಲಿದೆ ಎಂದು ಅಣ್ಣಾಮಲೈ ಭರವಸೆ ವ್ಯಕ್ತಪಡಿಸಿದರು.

ದೇಶದ ಜನತೆಯ ನೆಚ್ಚಿನ ನಾಯಕ ನರೇಂದ್ರ ಮೋದಿ ಅವರನ್ನುಮತ್ತೆ ಪ್ರಧಾನಿ ಮಾಡುವಲ್ಲಿ ಒಂದೊಂದು ಮತವೂ ಅತ್ಯಂತ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಇದೇ ಸಮದರ್ಭದಲ್ಲಿ ಅಣ್ಣಾಮಲೈ ಅವರಿಗೆ ಸಂಸದ ನಳಿನ್‌ ಕುಮಾರ್ ಕಟೀಲ್ ಅವರು ಸ್ಮರಣಿಕೆ ನೀಡಿ ಗೌರವಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ರಾಜೇಶ್ ನಾಯಕ್, ಚುನಾವಣೆ ಪ್ರಭಾರಿ ಕ್ಯಾ. ಗಣೇಶ್ ಕಾರ್ಣಿಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಕ್ಷದ ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿ. ನಾಗರಾಜ ಶೆಟ್ಟಿ ಸೇರಿದಂತೆ ಹಲವು ಪ್ರಮುಖರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

ಮಂಗಳೂರು: ಮಂಗಳೂರಿನ ಎ.ಜೆ. ತಾಂತ್ರಿಕ ಕಾಲೇಜಿನಲ್ಲಿ ಅ.8, 9ರಂದು ರಾಷ್ಟ್ರೀಯ ಮಟ್ಟದ ಹ್ಯಾಕಥಾನ್; ₹1 ಲಕ್ಷ ಬಹುಮಾನ

ಬಂಟ್ವಾಳ: ಫಾರಂ ನಂ.7 ದುರುಪಯೋಗ ಆರೋಪ; ಕ್ರಮಕ್ಕೆ ಒತ್ತಾಯಿಸಿ ತಹಶೀಲ್ದಾರ್‌ಗೆ ರಮಾನಾಥ ರೈ ಮನವಿ

ಬಂಟ್ವಾಳ: ಆನೆದೋಡಿಯಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿ; ಮಹಿಳೆಗೆ ಗಾಯ

error: Content is protected !!