ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತ ಸಂದೀಪ್ ಎಕ್ಕೂರು ಪೊಲೀಸ್ ಅಧಿಕಾರಿಯೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ. ಪೊಲೀಸ್ ಅಧಿಕಾರಿಯನ್ನ ತಳ್ಳಾಡಿ ಪುಂಡಾಟ ಮಾಡಿದ್ದು ಅಧಿಕಾರಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ನಗರದ ಕಂಕನಾಡಿ ಕಪಿತಾನಿಯೋ ಶಾಲಾ ಮತಗಟ್ಟೆ ಬಳಿ ಘಟನೆ ನಡೆದಿದೆ.




ಇನ್ನು ವಿಡಿಯೋ ಚಿತ್ರೀಕರಣ ಮಾಡಿದ ಮಾಧ್ಯಮದವರು ಮೇಲೆ ಕಾರ್ಯಕರ್ತ ಹರಿಹಾಯ್ದಿದ್ದಾರೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ.



