ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ನಾರ್ತ್ ಶಾಲೆಯ ಮತಗಟ್ಟೆ ಸಂಖ್ಯೆ 185ರಲ್ಲಿ ಅಷ್ಟಮಠಾಧೀಶರು ಮತದಾನ ಮಾಡಿದರು.

ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಅದಮಾರು ಮಠದ ಹಿರಿಯ ವಿಶ್ವಪ್ರಿಯತೀರ್ಥ ಶ್ರೀಪಾದರು, ಕಿರಿಯ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು,
ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥ ಶ್ರೀಪಾದರು ಹಾಗೂ ಸೋದೆ ಮಠದ ವಿಶ್ವವಲ್ಲಭತೀರ್ಥ ಶ್ರೀಪಾದರು ನಾರ್ತ್ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಪಲಿಮಾರು ಮಠದ ಕಿರಿಯ ಶ್ರೀಪಾದರು ಮೊದಲ ಬಾರಿಗೆ ಮತದಾನ ಮಾಡಿದರು.




