ಜನ ಮನದ ನಾಡಿ ಮಿಡಿತ

Advertisement

ಮೇ.3ರಂದು `ಗಬ್ಬರ್ ಸಿಂಗ್’ ತುಳು ಸಿನಿಮಾ ಬಿಡುಗಡೆ

ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್‌ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್’ ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ ಶೆಟ್ಟಿ ಮಾಣಿ ತಿಳಿಸಿದ್ದಾರೆ.

ಅವರು ಬುಧವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಚಂದ್ರಶೇಖರ ಸನಿಲ್ ಮತ್ತು ನಾಗೇಶ್ ಪೂಜಾರಿ ಅರ್ಪಿಸುವ ಗಬ್ಬರ್ ಸಿಂಗ್ ಸಿನಿಮಾದಲ್ಲಿ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಪಕರಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಪ್ರದೀಪ್ ನಿರ್ದೇಶನದಲ್ಲಿ, ಪುಷ್ಪರಾಜ್ ಮತ್ತು ಜಯರಾಜ್ ಸಹನಿರ್ದೇಶನದಲ್ಲಿ ಸಿನಿಮಾ ತಯಾರಾಗಿದ್ದು, ಮಧು ಸುರತ್ಕಲ್ ಸಂಭಾಷಣೆ ಬರೆದಿದ್ದಾರೆ.
ಶರಣ್ ಶೆಟ್ಟಿ ನಾಯಕ, ವೆನ್ಸಿಟಾ ಡಯಾಸ್ ನಾಯಕಿಯಾಗಿ ಅಭಿನಯಿಸಿದ್ದು, ಮುಖ್ಯ ಭೂಮಿಕೆಯಲ್ಲಿ ಹಾಸ್ಯ ನಟರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೊಜರಾಜ್ ವಾಮಂಜೂರು, ರವೀ ರಾಮಕುಂಜ ಸೇರಿದಂತೆ ಹಲವಾರು ಹಾಸ್ಯ ಕಲಾವಿದರು ಚಿತ್ರದಲ್ಲಿದ್ದಾರೆ. ಕರಾವಳಿಯ ಮಂಗಳೂರು, ಉಡುಪಿ, ಬ್ರಹ್ಮಾವರ, ಕಾರ್ಕಳ, ಬೈಂದೂರು ಮತ್ತಿತರ ಪ್ರದೇಶಗಳಲ್ಲಿ ಸಿನಿಮಾ ಚಿತ್ರೀಕರಣ ನಡೆಸಲಾಗಿದೆ.
ಮೇ. ೩ರಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಥಿಯೇಟರ್‌ಗಳಲ್ಲಿ ಸಿನಿಮಾ ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ಧಿಗೋಷ್ಠಿಯಲ್ಲಿ ಗಬ್ಬರ್‌ಸಿಂಗ್ ಸಿನಿಮಾದ ನಾಯಕ ನಟ ಶರಣ್ ಶೆಟ್ಟಿ, ನಾಯಕಿ ನಟಿ ವೆನ್ಸಿಟಾ ಡಯಾಸ್ ಸಿನಿಮಾದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!