ಜನ ಮನದ ನಾಡಿ ಮಿಡಿತ

Advertisement

ದಕ್ಷಿಣ ಕನ್ನಡ : ಹೆಚ್ಚುತ್ತಿರುವ ತಾಪಮಾನ, ಆರೋಗ್ಯ ಇಲಾಖೆಯಿಂದ ಮಾಹಿತಿ

ದಕ್ಷಿಣ ಕನ್ನಡ :ಜಿಲ್ಲೆಯಲ್ಲಿ ಹೆಚ್ಚುತ್ತಿರುವ ವಿಪರೀತ ತಾಪಮಾನದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ, ತಾಲೂಕ ಮಟ್ಟದಲ್ಲಿ, ಆರೋಗ್ಯ ಕೇಂದ್ರಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ ಎಚ್ .ಆರ್. ತಿಮ್ಮಯ್ಯ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಶಕಗಳ ತಾಪಮಾನವನ್ನು ಗಮನಿಸಿದಾಗ 32 ಡಿಗ್ರಿ ಸೆಲ್ಸಿಯಸ್ ನಿಂದ 33ಡಿ ಸೆ.ದಾಖಲಾಗುತ್ತಿತ್ತು. ಈ ಬಾರಿ ತಾಪಮಾನ 36ರಿಂದ 40 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ. ಈ ರೀತಿ ತಾಪಮಾನದಿಂದ ಬಿಸಿಲಿನಲ್ಲಿ ಹೆಚ್ಚು ಓಡಾಡುತ್ತಿರುವವರಿಗೆ ತಲೆ ನೋವು, ಸುಸ್ತು, ನಿಶ್ಯಕ್ತಿ, ಚರ್ಮ ತುರಿಕೆ, ಜ್ವರ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ. ಕೆಲವೊಮ್ಮೆ ಬಿಸಿಲಿನಾಘಾತ ಸಂಭವಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಮುಂಜಾಗ್ರತೆಯ
ಕ್ರಮ ಕೈಗೊಳ್ಳುವ ಅಗತ್ಯ ವಿದೆ ಎಂದು ಡಾ.ತಿಮ್ಮಯ್ಯ ತಿಳಿಸಿದ್ದಾರೆ.

ಬಿಸಿಲಿನ ಝಳ ಹೆಚ್ಚಿರುವ ಸಂದರ್ಭದಲ್ಲಿ ಹೊರಗೆ ಓಡಾಡದೆ ಇರುವುದು ಸೂಕ್ತ. ಶುದ್ಧ ನೀರಿನ ಸೇವನೆ, ಮಜ್ಜಿಗೆ ಸೇವನೆ, ಬಿಳಿ ಅಥವಾ ತಿಳಿ ಬಣ್ಣದ ಬಟ್ಟೆಧರಿಸುವುದು, ಬಿಸಿಲಿನ ನೇರಾಘಾತ ತಡೆಯಲು ಚಪ್ಪಲಿ ಧರಿಸುವುದು, ಕೊಡೆ ಬಳಸುವುದು ಉತ್ತಮ. ದೇಹ ನಿರ್ಜಲೀಕರಣವಾಗದಂತೆ ಎಚ್ಚರ ವಹಿಸಬೇಕು ಎಂದು ಡಾ.ತಿಮ್ಮಯ್ಯ ಸಲಹೆ ನೀಡಿದರು.

ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲಿ ಸೊಳ್ಳೆಗಳು ಹೆಚ್ಚುತ್ತಿರುವ ಕಾರಣ ಡೆಂಗ್ಯೂ ಜ್ವರದ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಪ್ರಕರಣಗಳು ಕಂಡು ಬಂದಿವೆ. ಹೊರ ಜಿಲ್ಲೆಯ ಪ್ರಯಾಣಿಕರು ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾರಣ ಡೆಂಗ್ಯೂ ಪೀಡಿತರ ಸಂಪರ್ಕದಿಂದಲೂ ಅಲ್ಪ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ನವೀನ್ ಚಂದ್ರ ಕುಲಾಲ್ ತಿಳಿಸಿದ್ದಾರೆ.ನಾವು ಸೇವಿಸುವ ಮಸಾಲೆಯುಕ್ತ ಆಹಾರ ಪದಾರ್ಥಗಳು ಬೇಸಗೆಯಲ್ಲಿ ಸೂಕ್ತವಲ್ಲ ಎಂದು ಡಾ.ನವೀನ್ ಕುಲಾಲ್ ಸಲಹೆ ನೀಡಿದರು. ಸಂವಾದ ಗೋಷ್ಠಿಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹಮ್ಮಿಕೊಂಡ ಮಾಧ್ಯಮ ಸಂವಾದ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!